ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನೂತನ ಪಾರ್ಕಿಂಗ್‌ ನೀತಿ ನಿರ್ಧಾರವಾಗಿಲ್ಲ’

ಸರ್ಕಾರಿ ಕಲಾ ಕಾಲೇಜಿನಲ್ಲಿ ಜಿಮ್‌ ಹೌಸ್‌ ಉದ್ಘಾಟನೆ
Last Updated 18 ಫೆಬ್ರುವರಿ 2021, 20:55 IST
ಅಕ್ಷರ ಗಾತ್ರ

ಬೆಂಗಳೂರು: ‘ನೂತನ ಪಾರ್ಕಿಂಗ್ ನೀತಿ ಬಗ್ಗೆ ಸರ್ಕಾರ ಈವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ’ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಗುರುವಾರ ನೂತನ ಜಿಮ್‌ ಹೌಸ್‌ ಉದ್ಘಾಟಿಸಿ ಮಾತನಾಡಿದ ಅವರು, ‘ದುಬಾರಿ ಪಾರ್ಕಿಂಗ್ ಶುಲ್ಕ ವಿಧಿಸಿ, ವಾಹನ ಸಂಚಾರ ಕಡಿಮೆ ಮಾಡುವ ಮೂಲಕ ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸಬೇಕು ಎಂದು ತಜ್ಞರಿಂದ ಸಲಹೆ ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಿದ ನಂತರವೇ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ’ ಎಂದು ಸ್ಪಷ್ಟಪಡಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್‌ ಅರ್ಷದ್‌, ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ, ಕಾಲೇಜು ಶಿಕ್ಷಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಬಾಲಚಂದ್ರ, ಸರ್ಕಾರಿ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಡಾ.ಟಿ.ಎಂ.ಮಂಜುನಾಥ, ಕಾಲೇಜಿನ ಪ್ರಾಚಾರ್ಯ ಪ್ರೊ.ಕೋಡದ ರಾಜಶೇಖರಪ್ಪ, ಸಹಾಯಕ ಪ್ರಾಧ್ಯಾಪಕಿ ಡಾ. ಶಶಿಕಲಾ ಮುಂತಾದವರು ಭಾಗಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT