ಶನಿವಾರ, ಜನವರಿ 28, 2023
20 °C

ವೃದ್ಧೆ ಕೈ– ಕಾಲು ಕಟ್ಟಿಹಾಕಿ ದರೋಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕುಮಾರಸ್ವಾಮಿ ಲೇಔಟ್ ಠಾಣೆ ವ್ಯಾಪ್ತಿಯ ಮನೆಯೊಂದಕ್ಕೆ ನುಗ್ಗಿದ್ದ ದುಷ್ಕರ್ಮಿಗಳು, ವೃದ್ಧೆಯೊಬ್ಬರ ಕೈ–ಕಾಲು ಕಟ್ಟಿಹಾಕಿ ಚಿನ್ನಾಭರಣ ಹಾಗೂ ನಗದು ದೋಚಿದ್ದಾರೆ.

‘ಜ. 3ರ ದರೋಡೆ ಬಗ್ಗೆ ವೃದ್ಧೆಯ ಮಗಳು ದೂರು ನೀಡಿದ್ದಾರೆ. ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು. ‘57 ವರ್ಷ ವಯಸ್ಸಿನ ಶ್ರೀಲಕ್ಷ್ಮಿ ಅವರು ವೈದ್ಯೆಯಾಗಿರುವ ಮಗಳ ಜೊತೆ ವಾಸವಿದ್ದಾರೆ. ಜ. 3ರಂದು ಬೆಳಿಗ್ಗೆ ಮಗಳು ಎಂದಿನಂತೆ ಕ್ಲಿನಿಕ್‌ಗೆ ಹೋಗಿದ್ದರು’.

‘ಮನೆಗೆ ನುಗ್ಗಿದ್ದ ಆರೋಪಿಗಳು, ಶ್ರೀಲಕ್ಷ್ಮಿ ಮೇಲೆ ಹಲ್ಲೆ ಮಾಡಿದ್ದರು.‌ ‌ ‌‌‌ ‌₹ 3.50 ಲಕ್ಷ ನಗದು, ₹ 4 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್ ದೋಚಿ ಆರೋಪಿಗಳು ಪರಾರಿಯಾಗಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು