ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈ ಮೀರಿ ಹೋಗುವ ಸ್ಥಿತಿ ಮಳೆಯಿಂದ ನಿರ್ಮಾಣವಾಗಿಲ್ಲ: ಸಿದ್ದರಾಮಯ್ಯ

Published 26 ಜುಲೈ 2023, 15:30 IST
Last Updated 26 ಜುಲೈ 2023, 15:30 IST
ಅಕ್ಷರ ಗಾತ್ರ

ಬೆಂಗಳೂರು: ’ಕೆಲವು ದಿನಗಳಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೈ ಮೀರಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಬುಧವಾರ ಹುತಾತ್ಮ ಯೋಧರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೆ.ಆರ್.ಎಸ್ , ಕಬಿನಿ, ಹಾರಂಗಿ, ಹೇಮಾವತಿ, ಆಲಮಟ್ಟಿ, ಸೇರಿದಂತೆ ಎಲ್ಲ ಜಲಾಶಯಗಳಿಗೆ ನೀರು ಹರಿದು ಬರುತ್ತಿರುವುದು ರೈತರಿಗೂ ಮತ್ತು ಸರ್ಕಾರಕ್ಕೂ ಖುಷಿ ನೀಡಿದೆ. ಬಿತ್ತನೆ ಕಾರ್ಯ ಚುರುಕುಗೊಂಡಿದ್ದು, ಕೆಲವೇ ದಿನಗಳಲ್ಲಿ ಶೇ 100ರಷ್ಟು ಬಿತ್ತನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಜುಲೈ 31 ಕ್ಕೆ ಮಂಗಳೂರು, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡುತ್ತೇನೆ. ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಜನರನ್ನು ಭೇಟಿಯಾಗಿ ಅವರ ಕಷ್ಟಗಳನ್ನು ಆಲಿಸುತ್ತೇನೆ’ ಎಂದು ತಿಳಿಸಿದರು.

‘ಎಲ್ಲೆಡೆ ಮಳೆಯಾಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಇದುವರೆಗೆ ಟ್ಯಾಂಕರ್ ನೀರಿನ ಸರಬರಾಜು ಮಾಡಲಾಗುತ್ತಿತ್ತು. ಆದರೆ, ಈಗ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ’ ಎಂದು ಮಾಹಿತಿ ನೀಡಿದರು.

ಯೋಧರ ಬದುಕು ಸ್ಫೂರ್ತಿ

‘ಕಾರ್ಗಿಲ್ ಯುದ್ಧದಲ್ಲಿ 524 ಯೋಧರು ದುರ್ಗಮ ಸ್ಥಳಗಳಲ್ಲಿ ಹೋರಾಡಿ ದೇಶವನ್ನು ರಕ್ಷಣೆ ಮಾಡಿದ್ದಾರೆ. ಅವರ ತ್ಯಾಗ, ಬಲಿದಾನವನ್ನು ನಾವು ಸ್ಮರಿಸಬೇಕು. ಅವರ ಜೀವನ ಇಂದಿನ ಯುವಕರಿಗೆ ಸ್ಫೂರ್ತಿ ಹಾಗೂ ಮಾರ್ಗದರ್ಶನವಾಗಬೇಕು’ ಎಂದರು.

ಬೆಂಗಳೂರಿನಲ್ಲಿ ಬುಧವಾರ ರಾಷ್ಟ್ರೀಯ ಸೈನಿಕ ಸ್ಮಾರಕ ಮ್ಯಾನೇಜ್‍ಮೆಂಟ್ ಟ್ರಸ್ಟ್ ಹಮ್ಮಿಕೊಂಡಿದ್ದ ‘ಕಾರ್ಗಿಲ್ ವಿಜಯ್ ದಿವಸ್’ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮಿಲಿಟರಿ ಸ್ಮಾರಕಕ್ಕೆ ವಿದ್ಯಾರ್ಥಿನಿಯರು ಪುಷ್ಪ ನಮನ ಸಲ್ಲಿಸಿದರು. –ಪ್ರಜಾವಾಣಿ ಚಿತ್ರ
ಬೆಂಗಳೂರಿನಲ್ಲಿ ಬುಧವಾರ ರಾಷ್ಟ್ರೀಯ ಸೈನಿಕ ಸ್ಮಾರಕ ಮ್ಯಾನೇಜ್‍ಮೆಂಟ್ ಟ್ರಸ್ಟ್ ಹಮ್ಮಿಕೊಂಡಿದ್ದ ‘ಕಾರ್ಗಿಲ್ ವಿಜಯ್ ದಿವಸ್’ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮಿಲಿಟರಿ ಸ್ಮಾರಕಕ್ಕೆ ವಿದ್ಯಾರ್ಥಿನಿಯರು ಪುಷ್ಪ ನಮನ ಸಲ್ಲಿಸಿದರು. –ಪ್ರಜಾವಾಣಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT