ಸೋಮವಾರ, ಆಗಸ್ಟ್ 8, 2022
23 °C

ಡ್ರಗ್ಸ್ ಪಾರ್ಟಿ: ರೂಪದರ್ಶಿಗಳಿಗೆ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಟ್ರಿನಿಟಿ ವೃತ್ತದಲ್ಲಿರುವ ದಿ ಪಾರ್ಕ್‌ ಹೋಟೆಲ್‌ನಲ್ಲಿ ಇತ್ತೀಚೆಗೆ ನಡೆದಿದ್ದ ಡ್ರಗ್ಸ್ ಪಾರ್ಟಿ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಹಲಸೂರು ಠಾಣೆ ಪೊಲೀಸರು, ಕೆಲ ರೂಪದರ್ಶಿಗಳಿಗೆ ನೋಟಿಸ್ ನೀಡಿದ್ದಾರೆ.

ಜೂನ್ 12ರಂದು ರಾತ್ರಿ ಹೋಟೆಲ್‌ನ ಬಾರ್ ಮೇಲೆ ದಾಳಿ ಮಾಡಿದ್ದ ಪೊಲೀಸರು, ಬಾಲಿವುಡ್ ನಟ ಸಿದ್ಧಾಂತ್ ಕಪೂರ್ ಸೇರಿದಂತೆ ಐವರನ್ನು ಬಂಧಿಸಿದ್ದರು. ಅವರ ಹೇಳಿಕೆ ಪಡೆದು, ಠಾಣೆ ಜಾಮೀನು ಮೇಲೆ ಬಿಡುಗಡೆ ಮಾಡಿದ್ದರು.

ದೇಶೀಯ ಹಾಗೂ ಅಂತರರಾಷ್ಟ್ರೀಯ ರೂಪದರ್ಶಿಗಳು ಸಹ ಪಾರ್ಟಿಯಲ್ಲಿ ಭಾಗವಹಿಸಿದ್ದ ಮಾಹಿತಿ ಸಂಗ್ರಹಿಸಿರುವ ಪೊಲೀಸರು, ವಾರದೊಳಗೆ ವಿಚಾರಣೆಗೆ ಹಾಜರಾಗುವಂತೆ ಅವರೆಲ್ಲರಿಗೂ ಇತ್ತೀಚೆಗೆ ನೋಟಿಸ್ ನೀಡಿದ್ದಾರೆ.

‘ಪಾರ್ಟಿಯಲ್ಲಿ ಡ್ರಗ್ಸ್ ಮಾತ್ರವಲ್ಲದೇ ಇತರೆ ಅಕ್ರಮ ಚಟುವಟಿಕೆ ನಡೆದಿದ್ದ ಮಾಹಿತಿ ಇದೆ. ಪೊಲೀಸರ ದಾಳಿ ವೇಳೆಯೇ ಕೆಲವರು ತಪ್ಪಿಸಿಕೊಂಡು ಹೋಗಿದ್ದಾರೆ. ಅವರಲ್ಲಿ ಬಹುತೇಕರು ರೂಪದರ್ಶಿಗಳು. ಅಂಥವರ ಪಟ್ಟಿ ಸಿದ್ಧಪಡಿಸಲಾಗಿದ್ದು, ವಿಚಾರಣೆ ನಡೆಸಬೇಕಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು