ಡ್ರಗ್ಸ್ ಮಾರಾಟ; ಮಾಜಿ ಕಾರ್ಪೊರೇಟರ್‌ಗೆ ನೋಟಿಸ್

ಬೆಂಗಳೂರು: ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಆರೋಪಿ ನೈಜೀರಿಯಾದ ಡೇವಿಡ್ ಒಕ್ನೊಕೊವಾ (31) ಜೊತೆ ಒಡನಾಟ ಹೊಂದಿರುವ ಆರೋಪದಡಿ ಮಾಜಿ ಕಾರ್ಪೊರೇಟರ್ ಅಬ್ದುಲ್ ರಕೀಬ್ ಜಾಕೀರ್ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಪುಲಿಕೇಶಿನಗರ ವಾರ್ಡ್‌ನ ಮಾಜಿ ಕಾರ್ಪೊರೇಟರ್ ಅಬ್ದುಲ್ ರಕೀಬ್ ಜಾಕೀರ್ ಅವರನ್ನು ಡಿ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲೂ ಬಂಧಿಸಲಾಗಿತ್ತು.
‘ಆರೋಪಿ ಡೇವಿಡ್‌ನನ್ನು 2022ರ ನವೆಂಬರ್ 8ರಂದು ಶಾಂಪೂರ ರೈಲ್ವೆ ಗೇಟ್ ಬಳಿ ಬಂಧಿಸಲಾಗಿತ್ತು. ಈತನಿಂದ 97 ಎಕ್ಸ್‌ಟೆಸ್ಸಿ ಮಾತ್ರೆಗಳು, ಮೊಬೈಲ್ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿತ್ತು’ ಎಂದು ಪೊಲೀಸರು
ಹೇಳಿದರು.
‘ಡೇವಿಡ್ ಮೊಬೈಲ್ ಪರಿಶೀಲನೆ ನಡೆಸಲಾಗಿತ್ತು. ಅಬ್ದುಲ್ ರಕೀಬ್ ಅವರು ಡೇವಿಡ್ ಮೊಬೈಲ್‌ಗೆ ಸಂದೇಶ ಕಳುಹಿಸಿದ್ದು ಇತ್ತೀಚೆಗೆ ಗೊತ್ತಾಗಿತ್ತು. ಹೀಗಾಗಿ, ವಿಚಾರಣೆಗೆ ಬರುವಂತೆ ಅಬ್ದುಲ್ ರಕೀಬ್ ಅವರಿಗೆ ನೋಟಿಸ್ ನೀಡಲಾಗಿದೆ. ಬುಧವಾರ ಅವರು ವಿಚಾರಣೆಗೆ ಬರುವ ಸಾಧ್ಯತೆ ಇದೆ. ವಿಚಾರಣೆಗೆ ಹಾಜರಾಗದಿದ್ದರೆ, ಎರಡನೇ ನೋಟಿಸ್ ನೀಡಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸರು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.