ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.10ರಂದು ಪೊಲೀಸ್ ಕಾನ್‌ಸ್ಟೆಬಲ್‌ ಲಿಖಿತ ಪರೀಕ್ಷೆ

Published 1 ಡಿಸೆಂಬರ್ 2023, 15:39 IST
Last Updated 1 ಡಿಸೆಂಬರ್ 2023, 15:39 IST
ಅಕ್ಷರ ಗಾತ್ರ

ಬೆಂಗಳೂರು: ಪೊಲೀಸ್ ಕಾನ್‌ಸ್ಟೆಬಲ್‌ (ಸಿವಿಲ್‌) ನೇಮಕಾತಿಗೆ ಡಿ.10ರಂದು ಲಿಖಿತ ಪರೀಕ್ಷೆ ನಡೆಯಲಿದೆ.

ಸೇವಾ ನಿರತ ಮತ್ತು ಬ್ಯಾಕ್‌ಲಾಗ್‌ 454 ಹುದ್ದೆಗಳ ನೇಮಕಾತಿಗೆ ಬೆಂಗಳೂರಿನ 40 ಪರೀಕ್ಷಾ ಕೇಂದ್ರಗಳಲ್ಲಿ 22,620 ಅಭ್ಯರ್ಥಿಗಳಿಗೆ (ಪುರುಷ, ಮಹಿಳೆ, ತೃತೀಯ ಲಿಂಗಿಗಳು, ಕಲ್ಯಾಣ ಕರ್ನಾಟಕ) ಲಿಖಿತ ಪರೀಕ್ಷೆ ನಡೆಸಲಾಗುವುದು.

ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಎಸ್ಎಂಎಸ್ ಮೂಲಕ ಮಾಹಿತಿ ನೀಡಲಾಗುವುದು. ಪ್ರವೇಶಪತ್ರದ ಲಿಂಕ್‌ ಅನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರ ಡೌನ್‌ಲೋಡ್‌ ಮಾಡಿಕೊಂಡು ನಿಗದಿತ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT