ಗುರುವಾರ , ಸೆಪ್ಟೆಂಬರ್ 23, 2021
22 °C

ಗುತ್ತಿಗೆ ಆಧಾರದಲ್ಲಿ ರಂಗಶಿಕ್ಷಕರ ನೇಮಕಕ್ಕೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರಿ, ಅನುದಾನಿತ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಪ್ರೌಢಶಾಲೆಗಳಿಗೆ ಗುತ್ತಿಗೆ ಆಧಾರದಲ್ಲಿ ರಂಗ ಶಿಕ್ಷಕರನ್ನು ನೇಮಕ ಮಾಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಕರ್ನಾಟಕ ನಾಟಕ ಅಕಾಡೆಮಿ ಪತ್ರ ಬರೆದಿದೆ.

‘ನೇಮಕಾತಿ ಪ್ರಾಧಿಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ನೇಮಕಾತಿ ಅಧಿಸೂಚನೆ ಅನ್ವಯ ಸರ್ಕಾರಿ ಪ್ರೌಢಶಾಲೆಗಳಲ್ಲಿ 2007ರಲ್ಲಿ 54 ರಂಗಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ನಂತರದ ವರ್ಷಗಳಲ್ಲಿ ನೇಮಕಾತಿ ನಡೆಯಲಿಲ್ಲ ಎಂದು ವಿವರಿಸಲಾಗಿದೆ.

ಶಾಲಾ ಶಿಕ್ಷಣದಲ್ಲಿ ರಂಗಕಲೆಯನ್ನು ಅಳವಡಿಸಬೇಕು ಎಂಬುದು ಕನ್ನಡ ರಂಗಭೂಮಿಯ ಬಹುಕಾಲದ ಬೇಡಿಕೆಯಾಗಿದೆ. ಇದರಿಂದ ಶಿಕ್ಷಣ ವ್ಯವಸ್ಥೆಯ ಚಿತ್ರಣ ಬದಲಾಗುವುದಲ್ಲದೆ ರಂಗಕಲೆಯನ್ನು ಮಕ್ಕಳಲ್ಲಿ ಬೆಳೆಸಿದಂತಾಗುತ್ತದೆ’ ಎಂದು ಅಕಾಡೆಮಿ ಅಧ್ಯಕ್ಷ ಜಿ.ಲೋಕೇಶ್‌ ಪತ್ರದಲ್ಲಿ ಬರೆದಿದ್ದಾರೆ.

‘ನೀನಾಸಂ, ಸಾಣೇಹಳ್ಳಿ ರಂಗಶಾಲೆ ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳ ರಂಗಶಿಕ್ಷಣದ ಡಿಪ್ಲೊಮಾ ಪದವಿ ಪಡೆದ ವಿದ್ಯಾರ್ಥಿಗಳು ಕೆಲಸಕ್ಕಾಗಿ ಅಲೆಯುತ್ತಿದ್ದಾರೆ. ಅವರ ಭವಿಷ್ಯದ ಉದ್ದೇಶದಿಂದ ಉತ್ತಮ ತೀರ್ಮಾನ ತೆಗೆದುಕೊಳ್ಳಬೇಕು’ ಎಂದು 
ಒತ್ತಾಯಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು