ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಲಸಕ್ಕಿದ್ದ ಮನೆಯಲ್ಲಿ ಕಳ್ಳತನ: ₹16 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ

Published 14 ಜೂನ್ 2024, 19:44 IST
Last Updated 14 ಜೂನ್ 2024, 19:44 IST
ಅಕ್ಷರ ಗಾತ್ರ

ಬೆಂಗಳೂರು: ಕೆಲಸಕ್ಕಿದ್ದ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪದಡಿ ಮಹಿಳೆಯೊಬ್ಬರನ್ನು ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದು, ₹ 16 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.

‘ಹಲಸೂರಿನ ಜೋಗುಪಾಳ್ಯದ ಮಾರಪ್ಪ ರಸ್ತೆಯ ಮನೆಯೊಂದರಲ್ಲಿ ಆರೋಪಿ ಕೆಲಸಕ್ಕಿದ್ದ ಮಾಡುತ್ತಿದ್ದಳು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆರೋಪಿ ಚಿನ್ನಾಭರಣ ಕದಿದ್ದರು. ಚಿನ್ನದ ಆಭರಣಗಳ ಬಗ್ಗೆ ಮನೆಯ ಮಾಲೀಕರು ಹೆಚ್ಚು ಗಮನಿಸಿರಲಿಲ್ಲ. ಕೆಲ ತಿಂಗಳ ನಂತರ ಮನೆಯಲ್ಲಿದ್ದ ಚಿನ್ನಾಭರಣಗಳು ಕಾಣದಿರುವಾಗ ಕಳ್ಳತನವಾಗಿರುವ ಬಗ್ಗೆ ಪೊಲೀಸ್‌ ಠಾಣೆಗೆ ಬಂದು ದೂರು ನೀಡಿದ್ದರು’ ಎಂದು ಪೊಲೀಸರು ಹೇಳಿದರು.

‘ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಕೆಲಸದಾಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ. ಆರೋಪಿಯು ಕಳ್ಳತನ ಮಾಡಿದ್ದ ಚಿನ್ನದ ಆಭರಣಗಳನ್ನು ಕರಗಿಸಿ, ಮೂರು ಚಿನ್ನದ ಗಟ್ಟಿಗಳನ್ನಾಗಿ ಮಾರ್ಪಡಿಸಿದ್ದರು. ಮೂರು ಚಿನ್ನದ ಗಟ್ಟಿಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT