ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಳವು: ಆರೋಪಿಗಳಿಗೆ ಥಳಿತ, ಒಬ್ಬ ಸಾವು

Published 13 ಜೂನ್ 2024, 19:47 IST
Last Updated 13 ಜೂನ್ 2024, 19:47 IST
ಅಕ್ಷರ ಗಾತ್ರ

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಕಬ್ಬಿಣ ಕಳ್ಳತನ ಮಾಡಲು ಬಂದಿದ್ದ ಇಬ್ಬರನ್ನು ಕೆಲಸಗಾರರೇ ಹಿಡಿದು ಥಳಿಸಿದ್ದು, ಒಬ್ಬ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮತ್ತೊಬ್ಬನ ಮೇಲೆ ಮಾರಾಣಾಂತಿಕ ಹಲ್ಲೆ ನಡೆದಿರುವ ಘಟನೆ ಕೋಣನಕುಂಟೆ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.

ಮೃತಪಟ್ಟವನು ಅಂಜನಾಪುರದ ನಿವಾಸಿ ಸಲ್ಮಾನ್‌. ಗಾಯಗೊಂಡ ಸಲೀಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಕೋಣನಕುಂಟೆಯ ಆರ್‌ಬಿಐ ಲೇಔಟ್‌ನಲ್ಲಿ ಕಟ್ಟಡ ಕಾಮಗಾರಿ‌ ನಡೆಯುತ್ತಿತ್ತು. ಸ್ನೇಹಿತರಾಗಿದ್ದ ಸಲ್ಮಾನ್ ಹಾಗೂ ಸಲೀಂ ಗುರುವಾರ ನಸುಕಿನಲ್ಲಿ ನಿರ್ಮಾಣ ಹಂತದ ಕಟ್ಟದಲ್ಲಿದ್ದ ಕಬ್ಬಿಣ ಹಾಗೂ ಕಟ್ಟಡ ಸಾಮಗ್ರಿಗಳನ್ನು ಕಳ್ಳತನ ಮಾಡುತ್ತಿದ್ದರು. ಅದೇ ಕಟ್ಟಡದ ಐವರು ಕೆಲಸಗಾರರು ಸಲೀಂ ಹಾಗೂ ಸಲ್ಮಾನ್‌ರನ್ನು ಹಿಡಿದು ಕಟ್ಟಿ ಹಾಕಿ, ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT