ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಲಸ ಕೊಟ್ಟ ಕಂಪನಿಯಲ್ಲಿ ಕಳ್ಳತನ: ಇಬ್ಬರು ಲ್ಯಾಬ್‌ ಟೆಕ್ನಿಷಿಯನ್ ಸೇರಿ ಯವರ ಬಂಧನ

Published 12 ಮಾರ್ಚ್ 2024, 16:12 IST
Last Updated 12 ಮಾರ್ಚ್ 2024, 16:12 IST
ಅಕ್ಷರ ಗಾತ್ರ

ಬೆಂಗಳೂರು: ಕುಮಾರಸ್ವಾಮಿ ಲೇಔಟ್ ಠಾಣೆ ವ್ಯಾಪ್ತಿಯ ಕಂಪನಿಯೊಂದರಲ್ಲಿ ನಡೆದಿದ್ದ ಕಳ್ಳತನ ಸಂಬಂಧ ಇಬ್ಬರು ಲ್ಯಾಬ್‌ ಟೆಕ್ನಿಷಿಯನ್ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

‘ಕಂಪನಿಯಲ್ಲಿದ್ದ ಲ್ಯಾಪ್‌ಟಾಪ್ ಹಾಗೂ ಇತರೆ ಸಾಮಗ್ರಿಗಳನ್ನು ಕಳ್ಳತನ ಮಾಡಿದ್ದ ಬಗ್ಗೆ ದೂರು ದಾಖಲಾಗಿತ್ತು. ಕೆಲ ಪುರಾವೆ ಆಧರಿಸಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ತಪ್ಪೊಪ್ಪಿಕೊಂಡರು’ ಎಂದು ಪೊಲೀಸರು ಹೇಳಿದರು.

‘ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಲ್ಯಾಬ್‌ ಟೆಕ್ನಿಷಿಯನ್‌ಗಳು, ಕಳ್ಳತನಕ್ಕೆ ಸಂಚು ರೂಪಿಸಿದ್ದರು. ಮೂವರು ಆರೋಪಿಗಳ ಸಹಾಯ ಪಡೆದಿದ್ದರು. ಐವರು ಸೇರಿ ಕಂಪನಿಯಲ್ಲಿದ್ದ ಲ್ಯಾಪ್‌ಟಾಪ್ ಹಾಗೂ ಇತರೆ ಸಾಮಗ್ರಿಗಳನ್ನು ಕದ್ದೊಯ್ದಿದ್ದರು. ಇವರಿಂದ ₹ 16 ಲಕ್ಷ ಮೌಲ್ಯದ 29 ಲ್ಯಾಪ್‌ಟಾಪ್ ಹಾಗೂ 59 ಕ್ರೋಮ್ ಬಾಕ್ಸ್‌ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT