ಗುರುವಾರ, 21 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ವಾಹನ ಕಳವು, ಸುಲಿಗೆ; ಮೂವರು ಬಂಧನ

Published 8 ಸೆಪ್ಟೆಂಬರ್ 2023, 16:09 IST
Last Updated 8 ಸೆಪ್ಟೆಂಬರ್ 2023, 16:09 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿಚಕ್ರ ವಾಹನ ಕಳ್ಳತನ ಹಾಗೂ ಸುಲಿಗೆ ಪ್ರಕರಣದ ಮೂವರು ಆರೋಪಿಗಳನ್ನು ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ವಿನೋದ್ (22), ಪ್ರಶಾಂತ್ (19) ಹಾಗೂ ರಾಜೀವ್‌ಕುಮಾರ್ ಗುಪ್ತ ಬಂಧಿತರು. ಅವರಿಂದ ₹ 5 ಲಕ್ಷ ನಗದು, 46 ಗ್ರಾಂ ಚಿನ್ನಾಭರಣ, 250 ಗ್ರಾಂ ಬೆಳ್ಳಿ ಸಾಮಗ್ರಿ ಹಾಗೂ ಮೂರು ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಮೂವರು ಆರೋಪಿಗಳು, ಅಪರಾಧ ಹಿನ್ನೆಲೆಯುಳ್ಳವರು. ಅಶೋಕನಗರ, ಆಡುಗೋಡಿ, ಪುಲಿಕೇಶಿನಗರ ಠಾಣೆ ವ್ಯಾಪ್ತಿಯಲ್ಲೂ ಕೃತ್ಯ ಎಸಗಿದ್ದರು. ಕೆಲ ತಿಂಗಳು ಜೈಲಿನಲ್ಲಿದ್ದು ಜಾಮೀನು ಮೇಲೆ ಹೊರಬಂದಿದ್ದ ಆರೋಪಿಯೊಬ್ಬ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನ ಬಂಧನಕ್ಕೆ ವಾರೆಂಟ್ ಜಾರಿಯಲ್ಲಿತ್ತು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT