ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನದಲ್ಲಿ ಬಂದು ಕಳ್ಳತನ: ಮೂವರ ಬಂಧನ

Last Updated 18 ಮಾರ್ಚ್ 2022, 16:19 IST
ಅಕ್ಷರ ಗಾತ್ರ

ಬೆಂಗಳೂರು: ಪಶ್ಚಿಮ ಬಂಗಾಳದಿಂದ ವಿಮಾನದಲ್ಲಿ ನಗರಕ್ಕೆ ಬಂದು ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.

‘ಪಶ್ಚಿಮ ಬಂಗಾಳದ ನದಿಯಾ ಜಿಲ್ಲೆಯ ಹರಿದಾಸ್ ಬರಾಯಿ (37), ಪಾರ್ಥ್‌ ಹಲ್ದಾರ್ ಅಲಿಯಾಸ್ ರಾಕೇಶ್ (32) ಹಾಗೂ ರತನ್ ಸಹಾ (52) ಬಂಧಿತರು. ಇವರಿಂದ ₹ 38 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೂರ್ಣ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ಹೇಳಿದರು.

‘ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದ ಆರೋಪಿಗಳು, ಆಗಾಗ ವಿಮಾನದಲ್ಲಿ ಬೆಂಗಳೂರಿಗೆ ಬರುತ್ತಿದ್ದರು. ಅಂಗಳದಲ್ಲಿ ಕಸ ಹಾಗೂ ದಿನಪತ್ರಿಕೆಗಳು ಬಿದ್ದಿರುತ್ತಿದ್ದ ಮನೆಗಳನ್ನು ಗುರುತಿಸಿ ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದರು. ರಾತ್ರಿ ವೇಳೆ ಬಾಗಿಲು ಬೀಗ ಮುರಿದು ಮನೆಯೊಳಗೆ ನುಗ್ಗಿ ಚಿನ್ನಾಭರಣ ಕದ್ದುಕೊಂಡು ಪರಾರಿಯಾಗುತ್ತಿದ್ದರು’ ಎಂದೂ ತಿಳಿಸಿದರು.

‘ಬಾಣಸವಾಡಿ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಫೆ. 12ರಂದು ಕಳ್ಳತನ ಆಗಿತ್ತು. ಆರೋಪಿಗಳ ಸುಳಿವು ಸಿಗುತ್ತಿದ್ದಂತೆ ಪೊಲೀಸರ ತಂಡ, ಪಶ್ಚಿಮ ಬಂಗಾಳಕ್ಕೆ ಹೋಗಿ ಆರೋಪಿಗಳನ್ನು ಬಂಧಿಸಿ ಕರೆತಂದಿದೆ. ದೆಹಲಿ ಹಾಗೂ ತೆಲಂಗಾಣ ರಾಜ್ಯದಲ್ಲೂ ಆರೋಪಿಗಳು ಕೃತ್ಯ ಎಸಗಿರುವ ಮಾಹಿತಿ ಇದೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT