ಕಳ್ಳರ ಬಂಧನ: ₹ 42.56 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಶುಕ್ರವಾರ, ಜೂಲೈ 19, 2019
23 °C

ಕಳ್ಳರ ಬಂಧನ: ₹ 42.56 ಲಕ್ಷ ಮೌಲ್ಯದ ಚಿನ್ನಾಭರಣ ವಶ

Published:
Updated:

ಬೆಂಗಳೂರು: ಐವರು ಕುಖ್ಯಾತ ಕಳ್ಳರನ್ನು ಬಂಧಿಸಿರುವ ವಿಜಯನಗರ ಉಪ ವಿಭಾಗದ ಪೊಲೀಸರು, ₹ 42.56 ಲಕ್ಷ ಮೌಲ್ಯದ 1 ಕೆ.ಜಿ. 417 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಪಶ್ಚಿಮ ವಿಭಾಗದ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಇತ್ತೀಚೆಗೆ ಕಳವು ಪ್ರಕರಣಗಳು ಹೆಚ್ಚು ನಡೆಯುತ್ತಿರುವ ಹಿನ್ನೆಲೆಯಲ್ಲಿ ಆರೋಪಿಗಳ ಪತ್ತೆಗೆ ಸಹಾಯಕ ಪೊಲೀಸ್‌ ಕಮೀಷನರ್‌ ಧರ್ಮೇಂದ್ರ ನೇತೃತ್ವದಲ್ಲಿ ವಿಜಯನಗರ, ಬಸವೇಶ್ವರ ನಗರ ಮತ್ತು ಕಾಮಾಕ್ಷಿಪಾಳ್ಯ ಠಾಣೆಗಳ ಇನ್‌ಸ್ಪೆಕ್ಟರ್‌ಗಳ ತಂಡ ರಚಿಸಲಾಗಿತ್ತು. ಈ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.

ಬೀಗ ಹಾಕಿದ ಮನೆಗಳಿಗೆ ನುಗ್ಗಿ ಚಿನ್ನಾಭರಣ ಕಳವು ಮಾಡುತ್ತಿದ್ದ ಪ್ರಕಾಶ್‌ (30) ಎಂಬಾತನನ್ನು ಬಂಧಿಸಿ, ₹ 20 ಲಕ್ಷ ಮೌಲ್ಯದ 833 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಿದ ಬೈಕ್‌ ಜಪ್ತಿ ಮಾಡಲಾಗಿದೆ. ಕಳವು ಮಾಡಿದ ಆಭರಣಗಳನ್ನು ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಗಿರವಿ ಇಟ್ಟಿರುವ ಬಗ್ಗೆ ಆರೋಪಿ ಮಾಹಿತಿ ನೀಡಿದ್ದಾನೆ.

ಬಸವೇಶ್ವರ ನಗರ, ಬ್ಯಾಡರಹಳ್ಳಿ, ವಿಜಯನಗರ, ಕಾಮಾಕ್ಷಿಪಾಳ್ಯ ಮತ್ತು ಮಾಗಡಿ ರಸ್ತೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ವಿವಿಧ ಕಳವು ಪ್ರಕರಣಗಳಲ್ಲಿ ಭಾಗಿಯಾದ ಇಬ್ಬರನ್ನು ಬಂಧಿಸಿರುವ ಬಸವೇಶ್ವರ ನಗರ ಠಾಣೆಯ ಪೊಲೀಸರು, ಆರೋಪಿಗಳಿಂದ ₹ 15 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಮಹೇಶ್‌ ಮತ್ತು ದಯಾನಂದ ಬಂಧಿತರು.

ಸುಂಕದಕಟ್ಟೆ ನಾಗೇಶ್‌ ಮತ್ತು ಹೇಮರಾಜು ಎಂಬಿಬ್ಬರನ್ನು ಬಂಧಿಸಿರುವ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು, ₹ 2.50 ಲಕ್ಷ ಮೌಲ್ಯದ 82 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಐಷಾರಾಮಿ ಜೀವನ ನಡೆಸಲು ಕಳ್ಳತನ ಮಾಡುತ್ತಿದ್ದುದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !