ಶನಿವಾರ, ಸೆಪ್ಟೆಂಬರ್ 18, 2021
26 °C

ಉದ್ಯಮಿ ಮನೆಯಲ್ಲಿ ಕಳ್ಳತನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಉದ್ಯಮಿಯೊಬ್ಬರ ಮನೆಯಲ್ಲಿದ್ದ ಅಮೆರಿಕನ್ ಡಾಲರ್‌ ಹಾಗೂ ಲಕ್ಷಾಂತರ ಹಣ ಕಳ್ಳತನ ಮಾಡಿದ್ದ ಆರೋಪದಡಿ ನಾಲ್ಕು ಆರೋಪಿಗಳನ್ನು ಮಾಗಡಿ ರಸ್ತೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ದೀಪಕ್, ಸುರೇಶ್ ಬಹದ್ದೂರ್, ಕಮಲ್ ಬಹದ್ದೂರ್ ಮತ್ತು ರಮೇಶ್ ಬಂಧಿತ ಆರೋಪಿಗಳು. ಇವರೆಲ್ಲರೂ ಉದ್ಯಮಿ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದರು’  ಎಂದು ಪೊಲೀಸರು ತಿಳಿಸಿದರು.

‘ಗ್ರಾನೈಟ್ ಉದ್ಯಮಿ ಆಗಿರುವ ವಿಜಯ್ ಅವರು ಅಮೆರಿಕದಲ್ಲಿರುವ ತನ್ನ ಮಗನಿಗೆ ತಲುಪಿಸಲು ಡಾಲರ್‌ಗಳನ್ನು ಮನೆಯಲ್ಲಿ ಇಟ್ಟಿದ್ದರು. ಈ ವಿಚಾರ ತಿಳಿದಿದ್ದ ಆರೋಪಿಗಳು, ಆ.4ರಂದು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಡಾಲರ್‌ಗಳು ಹಾಗೂ ಲಕ್ಷಾಂತರ ನಗದು ಕದ್ದು ಪರಾರಿಯಾಗಿದ್ದರು’ ಎಂದು ವಿವರಿಸಿದರು.

‘ಆರೋಪಿಗಳನ್ನು ಬಂಧಿಸಿ ₹18.40 ಲಕ್ಷ ನಗದು ಹಾಗೂ ಮೂರು ಸಾವಿರ ಅಮೆರಿಕನ್ ಡಾಲರ್‌ಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದೂ ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು