ಬುಧವಾರ, ಏಪ್ರಿಲ್ 21, 2021
31 °C

ಮನೆಯಲ್ಲಿ ಕಳವು: ಕೆಲಸದಾಕೆ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜರಾಜೇಶ್ವರಿನಗರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಕಳ್ಳತನ ಎಸಗಿದ್ದ ಆರೋಪದಡಿ ಆಶಾ (28) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

‘ಹಲಗೆವಡೇರಹಳ್ಳಿ ನಿವಾಸಿ ಆಶಾ, ದೂರುದಾರರ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಜ. 31ರಂದು ಚಿನ್ನಾಭರಣ ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಅವರಿಂದ ₹ 3.10 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಹಲವು ಮನೆಗಳಲ್ಲಿ ಆಶಾ ಕೆಲಸ ಮಾಡುತ್ತಿದ್ದರು. ಅಕ್ರಮವಾಗಿ ಹಣ ಸಂಪಾದಿಸುವ ಉದ್ದೇಶದಿಂದ ಕೆಲಸಕ್ಕಿದ್ದ ಮನೆಯಲ್ಲೇ ಕೃತ್ಯ ಎಸಗಿದ್ದರು. ಕದ್ದ ಆಭರಣಗಳನ್ನು ಮಾರಾಟ ಮಾಡಿದ್ದ ಆರೋಪಿ, ಅದರಿಂದ ಬಂದ ಹಣದಲ್ಲಿ ಓಮ್ನಿ ವಾಹನ ಖರೀದಿಸಿದ್ದರು. ವಾಹನವನ್ನೂ ಇದೀಗ ಜಪ್ತಿ ಮಾಡಲಾಗಿದೆ’ ಎಂದೂ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.