ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಮದ್ಯಪಾನ, ಧೂಮಪಾನ ಕಿರಿಕಿರಿ: ಕಮಿಷನರ್‌ಗೆ ದೂರು

Published 24 ಫೆಬ್ರುವರಿ 2024, 16:13 IST
Last Updated 24 ಫೆಬ್ರುವರಿ 2024, 16:13 IST
ಅಕ್ಷರ ಗಾತ್ರ

ಬೆಂಗಳೂರು: ‘ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಹಾಗೂ ಧೂಮಪಾನ ಮಾಡುವವರು ಹೆಚ್ಚಾಗುತ್ತಿದ್ದಾರೆ. ಇದರಿಂದ ಕಿರಿಕಿರಿ ಉಂಟಾಗುತ್ತಿದೆ’ ಎಂದು ವೈಟ್‌ಫೀಲ್ಡ್‌ ಹಾಗೂ ಸುತ್ತಮುತ್ತಲಿನ ನಿವಾಸಿಗಳು ಅಳಲು ತೋಡಿಕೊಂಡರು.

ಬೆಂಗಳೂರು ಪೊಲೀಸ್ ಕಮಿಷನರೇಟ್‌ ವತಿಯಿಂದ ಬ್ರೂಕ್‌ ಫೀಲ್ಡ್‌ನಲ್ಲಿ ಶನಿವಾರ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ನಿವಾಸಿಗಳು, ‘ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹಾಗೂ ಮದ್ಯಪಾನ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಂಥ ವ್ಯಕ್ತಿಗಳ ಬಗ್ಗೆ ನಿಯಂತ್ರಣ ಕೊಠಡಿಗೆ ಕರೆಗಳು ಬಂದರೆ, ತ್ವರಿತವಾಗಿ ಸ್ಪಂದಿಸಬೇಕು’ ಎಂದು ಆಗ್ರಹಿಸಿದರು.

ದೂರು ಆಲಿಸಿದ ಕಮಿಷನರ್ ಬಿ. ದಯಾನಂದ್, ‘ಆಯಾ ಠಾಣೆ ಇನ್‌ಸ್ಪೆಕ್ಟರ್‌ಗಳಿಗೆ ಸೂಚನೆ ನೀಡಲಾಗುವುದು’ ಎಂದರು.

‘ಮೊಬೈಲ್ ಹಾಗೂ ವಾಹನಗಳ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ. ಅಮಾಯಕರ ಹಣವನ್ನು ಸೈಬರ್ ವಂಚಕರು ದೋಚುತ್ತಿದ್ದಾರೆ. ಎಲ್ಲ ರೀತಿಯ ಅಪರಾಧಗಳನ್ನು ಹತ್ತಿಕ್ಕಲು ಪೊಲೀಸರು ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಬಿ. ದಯಾನಂದ್, ‘ನಗರದ ಬಹುತೇಕ ಪ್ರದೇಶಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲಾಗುತ್ತಿದೆ. ಈ ಕ್ರಮದಿಂದ ಕಳ್ಳತನ ಪ್ರಕರಣ ತಡೆಯಲು ಹಾಗೂ ಕಳ್ಳತನ ನಡೆದ ಸಂದರ್ಭದಲ್ಲಿ ಆರೋಪಿಗಳನ್ನು ಪತ್ತೆ ಮಾಡಲು ಅನುಕೂಲವಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT