ಬೆಂಗಳೂರು: ವಿದ್ಯಾರ್ಥಿಗಳು ದಿನದ 24 ಗಂಟೆಯೂ ಪಾಸ್ ಬಳಸಿ ಪ್ರಯಾಣ ಮಾಡಬಹುದು ಎಂದು ಬಿಎಂಟಿಸಿ ಸ್ಪಷ್ಟಪಡಿಸಿದೆ.
ಸಂಜೆ 7.30ರ ನಂತರ ಪಾಸ್ ಮಾನ್ಯವಿಲ್ಲವೆಂದು ಕೆಲ ನಿರ್ವಾಹಕರು ವಿದ್ಯಾರ್ಥಿಗಳಿಗೆ ಟಿಕೆಟ್ ನೀಡುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಬಿಎಂಟಿಸಿ ಕಚೇರಿಗೆ ದೂರು ನೀಡಿದ್ದರು.
ಈ ಸಂಬಂಧ ಸ್ಪಷ್ಟನೆ ನೀಡಿರುವ ಅಧಿಕಾರಿಗಳು, ‘ಪಾಸ್ ಹೊಂದಿರುವ ವಿದ್ಯಾರ್ಥಿಗಳ ಬಳಿ ನಿರ್ವಾಹಕರು ಟಿಕೆಟ್ ಪಡೆಯುವಂತಿಲ್ಲ. ವಿದ್ಯಾರ್ಥಿಗಳು ಪಾಸ್ ಬಳಸಿ ಯಾವ ಸಮಯದಲ್ಲಾದರೂ ಪ್ರಯಾಣಿಸಬಹುದು’ ಎಂದು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.