ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ವಾಸವಿದ್ದ 32 ವಿದೇಶಿ ಪ್ರಜೆಗಳನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದು, ಅವರ ಪೂರ್ವಾಪರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

‘ವೀಸಾ ಅವಧಿ ಮುಗಿದರೂ ತಮ್ಮ ದೇಶಕ್ಕೆ ವಾಪಸು ಹೋಗದ ವಿದೇಶಿ ಪ್ರಜೆಗಳು, ಡ್ರಗ್ಸ್ ಹಾಗೂ ಸೈಬರ್ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇದರ ಪತ್ತೆಗಾಗಿ ಸೋಮವಾರ ವಿಶೇಷ ಕಾರ್ಯಾಚರಣೆ ನಡೆಸಲಾಯಿತು’ ಎಂದು ಪೊಲೀಸರು ಹೇಳಿದರು.

‘ವಿವಿಧ ವಿಭಾಗದ ಠಾಣೆಗಳ ವ್ಯಾಪ್ತಿಯಲ್ಲಿ ಪ್ರಜೆಗಳು ವಾಸವಿದ್ದರು. ಇವರಿಗೆ ಮನೆ ಬಾಡಿಗೆ ನೀಡಿದ್ದ ಮಾಲೀಕರಿಂದಲೂ ಹೇಳಿಕೆ ಪಡೆಯಲಾಗುತ್ತಿದೆ’ ಎಂದೂ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.