ಮಂಗಳವಾರ, ಮಾರ್ಚ್ 21, 2023
20 °C

ಐಎಎಸ್ ಅಧಿಕಾರಿಗೆ ಬೆದರಿಕೆ: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್‌ ಅವರಿಗೆ ಜೀವ ಬೆದರಿಕೆಯೊಡ್ಡಿದ್ದ ಆರೋ‍ಪದಡಿ ಗೋವಿಂದರಾಜು ಎಂಬುವರನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಅಬಕಾರಿ ಸಚಿವ ಗೋಪಾ ಲಯ್ಯ ಅವರ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿ ಮೌದ್ಗಿಲ್ ಅವರಿಗೆ ಕರೆ ಮಾಡಿದ್ದ ಆರೋಪಿ, ಜೀವ ಬೆದರಿಕೆ ಹಾಕಿದ್ದ. ಈ ಬಗ್ಗೆ ದಾಖಲಾದ ಪ್ರಕರಣದಲ್ಲಿ ಆರೋಪಿ ಗೋವಿಂದರಾಜುನನ್ನು ಬಂಧಿಸಲಾಗಿದ್ದು, ಸದ್ಯ ಈತ ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದು ಮೂಲಗಳು ತಿಳಿಸಿವೆ.

‘ಮುನೀಶ್ ಮೌದ್ಗಿಲ್ ಆಡಳಿತಾತ್ಮಕ ಕಾರಣಕ್ಕಾಗಿ ತಮ್ಮ ಕಾರು ಚಾಲಕ ಆನಂದ್ ಅವರನ್ನು ಕೋಲಾರಕ್ಕೆ ವರ್ಗಾಯಿಸಿದ್ದರು. ಮೌದ್ಗಿಲ್‌ ಅವರಿಗೆ ರಾತ್ರಿ ಕರೆ ಮಾಡಿದ್ದ ಆರೋಪಿ, ‘ನಾನು ಗೋಪಾಲಯ್ಯ ಅವರ ಆಪ್ತ ಕಾರ್ಯದರ್ಶಿ. ಚಾಲಕ ಆನಂದ್ ವರ್ಗಾವಣೆಯನ್ನು ಕೂಡಲೇ ರದ್ದು ಮಾಡಬೇಕು. ಇಲ್ಲದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಬೆದರಿಸಿದ್ದ’ ಎಂದು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು