ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆದರಿಕೆ: ದರ್ಶನ್‌ ಅಭಿಮಾನಿ ಬಂಧನ

Published 25 ಜೂನ್ 2024, 16:27 IST
Last Updated 25 ಜೂನ್ 2024, 16:27 IST
ಅಕ್ಷರ ಗಾತ್ರ

ಬೆಂಗಳೂರು: ನಟ ದರ್ಶನ್‌ ಅಭಿಮಾನಿಗಳಿಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನೆ ನೀಡುತ್ತಿದ್ದ ಆರೋಪದ ಮೇಲೆ ಕಮಲಾನಗರದ ನಿವಾಸಿ ಚೇತನ್‌ ಎಂಬುವರನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿ, ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

‘ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪದ ಅಡಿ ನಟ ದರ್ಶನ್‌ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಚೇತನ್‌ ಅವರ ಅಭಿಮಾನಿ. ದರ್ಶನ್‌ ಬಂಧನವಾದ ಮೇಲೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಮಾಪಕ ಉಮಾಪತಿ ಸೇರಿ ಹಲವರಿಗೆ ಆರೋಪಿ ಬೆದರಿಕೆ ಹಾಕಿದ್ದರು. ಆರೋಪಿಯ ವಿರುದ್ಧ ಶಾಂತಿ ಭಂಗ ಹಾಗೂ ಬೆದರಿಕೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಗೆ ಎಚ್ಚರಿಕೆ ನೀಡಿ ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ದರ್ಶನ್‌ ಅವರ ಬಗ್ಗೆ ಇತ್ತೀಚೆಗೆ ಉಮಾಪತಿ ಅವರು ಮಾಧ್ಯಮಗಳಿಗೆ ಸಂದರ್ಶನ ನೀಡಿದ್ದರು. ಇದರಿಂದ ಆರೋಪಿ ಕೋಪಗೊಂಡಿದ್ದರು’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT