ಬೆಂಗಳೂರು: ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ನಿಂದಿಸಿ, ಜೀವಬೆದರಿಕೆ ಹಾಕಿದ್ದ ವ್ಯಕ್ತಿಯ ವಿರುದ್ದ ಕ್ರಮ ಕೈಗೊಳ್ಳುವಂತೆ ಕೋರಿ ವಕೀಲೆ ರೇಖಾ ಅವರು ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.

ಮೈಸೂರಿನಲ್ಲಿ ನಡೆಯುತ್ತಿದ್ದ ಮಾಧ್ಯಮಗೋಷ್ಠಿ ವೇಳೆ ಸ್ವಾಮೀಜಿಗೆ ಕೆ.ಎಸ್.ಶಿವರಾಮು ಎಂಬಾತ ‘ಮೀಸಲಾತಿ ಕೇಳಿ ನಮ್ಮ ಅನ್ನದ ತಟ್ಟೆಗೆ ಕೈಹಾಕಬೇಡಿ; ಕೈಹಾಕಿದರೆ ನಿಮ್ಮ ಕೈಯನ್ನು ಕತ್ತರಿಸುತ್ತೇವೆ’ ಎಂದು ಬೆದರಿಕೆ ಹಾಕಿದ್ದಾರೆ. ಆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಲಾಗಿದೆ.

‘ಪಕ್ಷಾತೀತವಾಗಿ ಸ್ವಾಮೀಜಿ ಹೋರಾಟ ನಡೆಸುತ್ತಿದ್ದಾರೆ. ಆದರೆ, ಆ ವ್ಯಕ್ತಿ ಬಿಜೆಪಿ ಏಜೆಂಟ್ ಎಂದು ನಿಂದಿಸಿದ್ದಾನೆ. ಶಿವರಾಮು ಅವರ ಹೇಳಿಕೆಯ ಹಿಂದೆ ಜಾತಿ ಜಾತಿಗಳ ಮಧ್ಯೆ ಸಂಘರ್ಷ ಉಂಟು ಮಾಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವುದಾಗಿದೆ. ಶ್ರೀಗಳ ಲಕ್ಷಾಂತರ ಭಕ್ತರನ್ನು ಪ್ರಚೋದಿಸಿ ಗಲಭೆ ಎಬ್ಬಿಸುವ ವ್ಯವಸ್ಥಿತ ಹುನ್ನಾರ ಅಡಗಿದೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

‘ದೂರುದಾರರಿಗೆ ಸ್ವೀಕೃತಿ ಪತ್ರ ನೀಡಲಾಗಿದೆ. ಮೈಸೂರಿನಲ್ಲಿ ಘಟನೆ ನಡೆದಿರುವ ಕಾರಣ ಅಲ್ಲಿಗೆ ಪ್ರಕರಣ ವರ್ಗಾವಣೆ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.