ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರ ಸೋಗಿನಲ್ಲಿ ಅಪಹರಣ:ಮೂವರ ಸೆರೆ

Last Updated 10 ಆಗಸ್ಟ್ 2021, 20:12 IST
ಅಕ್ಷರ ಗಾತ್ರ

ಬೆಂಗಳೂರು: ಪೊಲೀಸರ ಸೋಗಿನಲ್ಲಿ ವ್ಯಾಪಾರಿಗಳಿಬ್ಬರನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಮೂವರನ್ನು ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ನದೀಂ ಷರೀಫ್, ಸಂತೋಷ್ ಹಾಗೂ ಅಜರ್ ಬಂಧಿತರು. ಚಿನ್ನದ ವ್ಯಾಪಾರಿ ಅರವಿಂದ್ ಮೆಹ್ತಾ ಹಾಗೂ ದಿವಾಕರ್ ರೆಡ್ಡಿ ಎಂಬುವ ವರನ್ನು ಅಪಹರಿಸಿದ್ದ ಬಗ್ಗೆ ದೂರು ದಾಖಲಾಗಿತ್ತು. ಅದರನ್ವಯ ಆರೋಪಿ ಗಳನ್ನು ಬಂಧಿಸಲಾಗಿದೆ. ಸದ್ಯ ಆರೋಪಿ ಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಅರವಿಂದ್ ಮೆಹ್ತಾ ವಿರುದ್ಧ ದೆಹಲಿ ಹಾಗೂ ಹಲವು ರಾಜ್ಯಗಳಲ್ಲಿ ವಂಚನೆ ಪ್ರಕರಣಗಳು ದಾಖಲಾಗಿದ್ದವು. ಅದನ್ನು ತಿಳಿದುಕೊಂಡಿದ್ದ ಆರೋಪಿಗಳು, ಪೊಲೀಸರ ಸೋಗಿನಲ್ಲಿ ಇಬ್ಬರೂ ವ್ಯಾಪಾರಿಗಳನ್ನು ಹೋಟೆಲೊಂದರಲ್ಲಿ ಭೇಟಿಯಾಗಿದ್ದರು. ‘ನಿಮ್ಮ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸು ತ್ತೇವೆ. ಈ ರೀತಿ ಮಾಡಬಾರದೆಂದರೆ ಹಣ ನೀಡಬೇಕು’ ಎಂದು ಬೆದರಿಸಿ ದ್ದರು.’

’ಕಾರಿನಲ್ಲಿ ಇಬ್ಬರನ್ನೂ ಅಪಹರಿಸಿ ಕೋರಮಂಗಲ ಬಳಿಯ ಹೋಟೆಲೊಂದಕ್ಕೆ ಕರೆದೊಯ್ದು ಅಕ್ರಮ ಬಂಧನದಲ್ಲಿಟ್ಟಿದ್ದರು. ₹ 10 ಲಕ್ಷ ನೀಡುವಂತೆ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ವ್ಯಾಪಾರಿಗಳ ಸ್ನೇಹಿತರೊಬ್ಬರು ದೂರು ನೀಡಿದ್ದರು. ಕಾರ್ಯಾಚರಣೆ ನಡೆಸಿ ವ್ಯಾಪಾರಿಗಳನ್ನು ರಕ್ಷಿಸಲಾಗಿದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT