ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದ ಹಲವು ಜಿಲ್ಲೆಗಳಲ್ಲಿ 120 ಮೊಬೈಲ್ ಕದ್ದಿದ್ದ ಭದ್ರಾವತಿಯ ಮೂವರು ಬಂಧನ

Published 27 ಜೂನ್ 2023, 15:47 IST
Last Updated 27 ಜೂನ್ 2023, 15:47 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೊಬೈಲ್‌ಗಳನ್ನು ಕದ್ದು ನಗರದಲ್ಲಿ ಮಾರಲು ಬಂದಿದ್ದ ಮೂವರು ಆರೋಪಿಗಳನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಸಂತೋಷ್ (32), ಅಭಿಲಾಷ್ (26) ಹಾಗೂ ಶ್ರೀನಿವಾಸ್ (28) ಬಂಧಿತರು. ಇವರಿಂದ ₹ 25 ಲಕ್ಷ ಮೌಲ್ಯದ 120 ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಬಸ್‌ ನಿಲ್ದಾಣ, ದೇವಸ್ಥಾನಗಳು, ಮಾರುಕಟ್ಟೆ ಹಾಗೂ ಜನರು ಹೆಚ್ಚು ಸೇರುತ್ತಿದ್ದ ಪ್ರದೇಶಗಳಲ್ಲಿ ಸುತ್ತಾಡುತ್ತಿದ್ದ ಆರೋಪಿಗಳು, ಸಾರ್ವಜನಿಕರ ಮೊಬೈಲ್‌ಗಳನ್ನು ಕದಿಯುತ್ತಿದ್ದರು. ಅಂಥ ಮೊಬೈಲ್‌ಗಳನ್ನು ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದರು. ಅದರಿಂದ ಬಂದ ಹಣವನ್ನು ಹಂಚಿಕೊಂಡು ಐಷಾರಾಮಿ ಜೀವನ ನಡೆಸುತ್ತಿದ್ದರು. ಹಣ ಖಾಲಿಯಾಗುತ್ತಿದ್ದಂತೆ ಪುನಃ ಕೃತ್ಯ ಎಸಗುತ್ತಿದ್ದರು.’

‘ಆರೋಪಿಗಳ ಬಗ್ಗೆ ಇತ್ತೀಚಿಗೆ ಮಾಹಿತಿ ಲಭ್ಯವಾಗಿತ್ತು. ಕಾರ್ಯಾಚರಣೆ ನಡೆಸಿ ಮೂವರನ್ನೂ ಬಂಧಿಸಲಾಗಿದೆ. ಕೃತ್ಯದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿರುವ ಅನುಮಾನವಿದ್ದು, ತನಿಖೆ ಮುಂದುವರಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT