ಗುರುವಾರ , ಮೇ 19, 2022
21 °C

ಗೌರಿಬಿದನೂರು: ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಬಾಲಕರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೌರಿಬಿದನೂರು: ತಾಲ್ಲೂಕಿನ‌ ಹೊಸೂರು ಹೋಬಳಿಯ ಹಂಪಸಂದ್ರದಲ್ಲಿ ಭಾನುವಾರ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರಿನಲ್ಲಿ ‌ಮುಳುಗಿ ಸಾವನ್ನಪ್ಪಿದ್ದಾರೆ. 

ಹಂಪಸಂದ್ರ ಗ್ರಾಮದ ಲಿಖಿತ್ (16), ರಾಜೇಶ್ (16) ಹಾಗೂ ಬೆಂಗಳೂರಿನ ಮನೋಜ್ (15) ಎಂದು ಮೃತಪಟ್ಟವರು. ಬೇಸಿಗೆ ರಜೆಗೆ ಅಜ್ಜಿ ಮನೆಗೆ ಬಂದಿದ್ದ ಬೆಂಗಳೂರಿನ ಮನೋಜ್, ಅಕ್ಕಪಕ್ಕದ ಮನೆಯ ಆರು ಸ್ನೇಹಿತರೊಂದಿಗೆ ಈಜಲು ತೆರಳಿದ್ದ. ಏಳು ಬಾಲಕರು ಕೃಷಿ ಹೊಂಡದಲ್ಲಿ ಮುಳುಗಿದ್ದರು. ಆ ಪೈಕಿ ನಾಲ್ವರು ಈಜಿ ದಡ ಸೇರಿ ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದ್ದಾರೆ.

ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕೃಷಿ ಹೊಂಡ ಒಡೆದು ಮೃತದೇಹ ಹೊರತೆಗೆದಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು