ಏರೋನಿಕ್ಸ್ ಇಂಟರ್‌ನೆಟ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಫಣೀಂದ್ರ ಸುಬ್ರಹ್ಮಣ್ಯ ಹಾಗೂ ಸಿಇಒ ವಿನುಕುಮಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಅಮೃತಹಳ್ಳಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬನ್ನೇರುಘಟ್ಟ ರಸ್ತೆ ಚಿಕ್ಕನಹಳ್ಳಿ ನಿವಾಸಿ, ಟಿಕ್‌ಟಾಕ್ ಸ್ಟಾರ್ ಶಬರಿಷ್ ಅಲಿಯಾಸ್ ಫೆಲಿಕ್ಸ್ , ರೂಪೇನಾ ಅಗ್ರಹಾರದ ವಿನಯ್ ರೆಡ್ಡಿ ಹಾಗೂ ಮಾರೇನಹಳ್ಳಿ ಸಂತು ಅಲಿಯಾಸ್ ಸಂತೋಷ್ ಬಂಧಿತ ಆರೋಪಿಗಳು.