ಗುರುವಾರ , ಅಕ್ಟೋಬರ್ 21, 2021
29 °C

ಚಾಮರಾಜಪೇಟೆ: ಸುಮಾರು 40 ಕೆ.ಜಿ ಪಟಾಕಿ ಸ್ಫೋಟ, ಇಬ್ಬರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಾಮರಾಜಪೇಟೆ ಬಳಿಯ ಸರಕು ಸಂಗ್ರಹ ಗೋದಾಮಿನಲ್ಲಿ ನಡೆದಿರುವ ಸ್ಫೋಟಕ್ಕೆ ಪಟಾಕಿ ಕಾರಣ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.

‘ಗೋದಾಮಿನಲ್ಲಿ 80 ಬಾಕ್ಸ್ ಪಟಾಕಿ ಸಂಗ್ರಹಿಸಲಾಗಿತ್ತು. ಪ್ರತಿಯೊಂದು ಬಾಕ್ಸ್ ತಲಾ ಸುಮಾರು 20 ಕೆ.ಜಿ ಇದ್ದವು.ಅಂಥ ಬಾಕ್ಸ್‌ಗಳ ಪೈಕಿ 2 ಬಾಕ್ಸ್‌ಗಳು ಸ್ಫೋಟಗೊಂಡಿದ್ದು, ಅದರ ಅವಶೇಷಗಳು ಪತ್ತೆಯಾಗಿವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಪಟಾಕಿಗಳು ಬಾಕ್ಸ್‌ನಲ್ಲಿ ಇದ್ದಿದ್ದರಿಂದ ತೀವ್ರ ಒತ್ತಡದಿಂದ ಸ್ಫೋಟ ಸಂಭವಿಸಿದೆ. ಬಾಂಬ್ ಸ್ಫೋಟಗೊಂಡ ರೀತಿಯಲ್ಲಿ ಸದ್ದು ಬಂದಿದೆ. ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು, ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಅವಶೇಷಗಳ ಮಾದರಿ ಸಂಗ್ರಹಿಸುತ್ತಿದ್ದಾರೆ’ ಎಂದೂ ತಿಳಿಸಿದರು.

‘ಪಟಾಕಿ ಸಂಗ್ರಹಕ್ಕೆ ಅನುಮತಿ ಇರಲಿಲ್ಲ. ಬಿಬಿಎಂಪಿಯಿಂದಲೂ ಪರವಾನಗಿ ಪಡೆದಿರಲಿಲ್ಲ. ಇದೊಂದು ಅಕ್ರಮವಾಗಿ ಪಟಾಕಿ ಸಂಗ್ರಹಿಸಿದ್ದ ಗೋದಾಮು. ಇದರ ಮಾಲೀಕರನ್ನು ಪತ್ತೆ ಮಾಡಲಾಗುತ್ತಿದೆ’ ಎಂದೂ ಹೇಳಿದರು.

ಇಬ್ಬರ ಸಾವು ಖಚಿತ; ಅವಘಢದಲ್ಲಿ ಇಬ್ಬರು ಮೃತಪಟ್ಟಿರುವ ಮಾಹಿತಿ ಖಚಿತವಾಗಿದೆ. ಇನ್ನೊಬ್ಬರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಅವಘಡದಲ್ಲಿ ಇಬ್ಬರಷ್ಟೇ ಮೃತಪಟ್ಟಿರಬಹುದು. ಉಳಿದಂತೆ, ಮೂವರು ಗಾಯಗೊಂಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು