ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಾಳೆಯೂ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

Published 22 ಮೇ 2024, 14:41 IST
Last Updated 22 ಮೇ 2024, 14:41 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಗುರುವಾರವೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಆರು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. 

ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮಂಡ್ಯ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಮೈಸೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ ಹಾಗೂ ಶಿವಮೊಗ್ಗ ಜಿಲ್ಲೆಯ ಹಲವೆಡೆ ಗುಡುಗು ಹಾಗೂ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಹೇಳಿದೆ. 

ಕರಾವಳಿಯಲ್ಲಿ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯುವ ಮುನ್ನ ಎಚ್ಚರ ವಹಿಸಬೇಕು ಎಂದು ಇಲಾಖೆ ತಿಳಿಸಿದೆ. 

ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳು ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ 29ರವರೆಗೂ ರಾಜ್ಯದ ಕೆಲವೆಡೆ ಮಳೆ ಮುಂದುವರಿಯುವ ಸಂಭವವಿದೆ ಎಂದು ಹೇಳಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT