ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕಲಿ ಗುರುತಿನ ಚೀಟಿ: ಟಿಬೆಟ್ ಪ್ರಜೆ ವಶಕ್ಕೆ

Last Updated 6 ಜುಲೈ 2019, 19:39 IST
ಅಕ್ಷರ ಗಾತ್ರ

ಬೆಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಭಾರತೀಯ ಗುರುತಿನ ಚೀಟಿಗಳನ್ನು ಪಡೆದಿದ್ದ ಟಿಬೆಟ್ ಪ್ರಜೆ ಟಾಪ್ಡೆನ್ (30) ಎಂಬಾತನನ್ನು ವಶಕ್ಕೆ ಪಡೆದಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಲಸೆ ಅಧಿಕಾರಿಗಳು, ಆತನನ್ನು ಪೊಲೀಸರ ಸುಪರ್ದಿಗೆ ಒಪ್ಪಿಸಿದ್ದಾರೆ.

ನೇಪಾಳದಿಂದ ವಿಮಾನದಲ್ಲಿ ನಗರದ ನಿಲ್ದಾಣಕ್ಕೆ ಬಂದಿಳಿದಿದ್ದ ಆರೋಪಿ, ವಲಸೆ ಅಧಿಕಾರಿಗಳ ಬಳಿ ಕೆಲ ದಾಖಲೆಗಳನ್ನು ಹಾಜರುಪಡಿಸಿದ್ದ. ಅವುಗಳ ಬಗ್ಗೆ ಅನುಮಾನಗೊಂಡಿದ್ದ ಅಧಿಕಾರಿಗಳು ಹೆಚ್ಚಿನ ತಪಾಸಣೆ ನಡೆಸಿದಾಗ ಆತ ಸಿಕ್ಕಿಬಿದ್ದ.

‘ಟಿಬೆಟ್ ಪ್ರಜೆ ಆಗಿದ್ದ ಆರೋಪಿ, ಭಾರತದಲ್ಲೇ ವಾಸವಿರುವಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದ. ಅದನ್ನು ಬಳಸಿಕೊಂಡು ಸ್ಥಳೀಯ ಚುನಾವಣಾ ಗುರುತಿನ ಚೀಟಿ, ಆಧಾರ್, ಪಾನ್‌ ಕಾರ್ಡ್ ಹಾಗೂ ಚಾಲನಾ ಪರವಾನಗಿ ಪತ್ರ ಪಡೆದಿದ್ದ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಆರೋಪಿ ವಿರುದ್ಧವಲಸೆ ಅಧಿಕಾರಿ ತರ್ಜಿತ್ ಸಿಂಗ್ ಅವರು ದೂರು ನೀಡಿದ್ದಾರೆ. ಯಾವ ಕಾರಣಕ್ಕಾಗಿ ಆರೋಪಿ ದೇಶಕ್ಕೆ ಬಂದಿದ್ದ ಹಾಗೂ ನಕಲಿ ದಾಖಲೆ ಸೃಷ್ಟಿಸಿದ್ದ ಎಂಬ ಬಗ್ಗೆ ತಿಳಿದುಕೊಳ್ಳಲು ತನಿಖೆ ಮುಂದುವರಿಸಲಾಗಿದೆ’ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT