ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಲಿ ಉಗುರು ಧರಿಸಿದ ಪ್ರಕರಣ: ವರ್ತೂರು ಸಂತೋಷ್ ಬಂಧನ ಖಂಡಿಸಿ ಪ್ರತಿಭಟನೆ

Published 25 ಅಕ್ಟೋಬರ್ 2023, 16:25 IST
Last Updated 25 ಅಕ್ಟೋಬರ್ 2023, 16:25 IST
ಅಕ್ಷರ ಗಾತ್ರ

ಕೆ.ಆರ್.ಪುರ: ಹಳ್ಳಿಕಾರ್ ವರ್ತೂರು ಸಂತೋಷ್ ಬಂಧನ ಖಂಡಿಸಿ ರಾಜ್ಯ ವಹ್ನಿಕುಲ ಕ್ಷತ್ರಿಯ ಸಂಘಟನೆಯ ಕಾರ್ಯಕರ್ತರು ಹಾಗೂ ಸಂತೋಷ್‌ ಅಭಿಮಾನಿಗಳು, ಗ್ರಾಮಸ್ಥರು ವರ್ತೂರಿನ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.

ಅರಣ್ಯಾಧಿಕಾರಿಗಳ ವಿರುದ್ಧ, ಕಪ್ಪು ಪಟ್ಟಿ ಧರಿಸಿ ಆಕ್ರೋಶ ವ್ಯಕ್ತಪಡಿಸಿದರು.

ಹಳ್ಳಿಕಾರ್ ರಾಸುಗಳ ಸಂರಕ್ಷಣೆಯ ಮೂಲಕ ಗುರುತಿಸಿಕೊಂಡಿರುವ ಸಂತೋಷ್ ಅವರನ್ನು ಬಂಧಿಸಿರುವುದು ರೈತರಿಗೆ ಮಾಡುತ್ತಿರುವ ಅಪಮಾನ. ಎಫ್‌ಎಸ್‌ಎಲ್ ವರದಿ ಬಂದ ನಂತರ ಕ್ರಮ ಕೈಗೊಳಬೇಕು. ಏಕಾಏಕಿ ಬಂಧಿಸಿರುವುದನ್ನು ನೋಡಿದರೆ ‘ಬಿಗ್ ಬಾಸ್‌‘ನಲ್ಲಿನ ಜನಪ್ರಿಯರಾಗುತ್ತಿರುವುದನ್ನು ಸಹಿಸದೇ ಅವರ ವಿರೋಧಿಗಳು ಪಿತೂರಿ ಮಾಡಿ ಬಂಧಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವರ್ತೂರ್​ ಸಂತೋಷ್​ ವಿರುದ್ಧ ಕಾನೂನು ಕ್ರಮ ಜರುಗಿಸಿದಷ್ಟು ವೇಗವಾಗಿ ದರ್ಶನ್​, ಜಗ್ಗೇಶ್​, ರಾಕ್​ಲೈನ್​ ವೆಂಕಟೇಶ್​ ವಿರುದ್ಧ ಯಾಕೆ ಜರುಗಿಸಿಲ್ಲ? ವಿನಯ್​ ಗುರೂಜಿ ಅವರು ಹುಲಿ ಚರ್ಮದ ಮೇಲೆ ಕುಳಿತಿದ್ದರು ಎಂಬ ಆರೋಪವೂ ಇದೆ. ಅವರ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT