ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬನ್ನೇರುಘಟ್ಟ ಉದ್ಯಾನ ಗಡಿಭಾಗದಲ್ಲಿ ಹುಲಿ-ಚಿರತೆ ಪ್ರತ್ಯಕ್ಷ್ಯ

Published 8 ನವೆಂಬರ್ 2023, 23:30 IST
Last Updated 8 ನವೆಂಬರ್ 2023, 23:30 IST
ಅಕ್ಷರ ಗಾತ್ರ

ಆನೇಕಲ್: ಬನ್ನೇರುಘಟ್ಟ ಜೈವಿಕ ಉದ್ಯಾನ ಮತ್ತು ಗಡಿ ಭಾಗ ಅರಣ್ಯ ಪ್ರದೇಶದ ರಸ್ತೆಯಲ್ಲಿ ಹುಲಿ ಮತ್ತು ಚಿರತೆ ಓಡಾಡುವ ದೃಶ್ಯ ಅರಣ್ಯ ಇಲಾಖೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮಂಗಳವಾರ ಮಧ್ಯಾಹ್ನ 1.57ರ ಸಮಯದಲ್ಲಿ ಹುಲಿ ಕಂಡಿದೆ. ನಂತರ ಇದೇ ಸ್ಥಳದಲ್ಲಿ ಸಂಜೆ 4ರ ಸುಮಾರಿನಲ್ಲಿ ಚಿರತೆ ಓಡಾಟ ನಡೆಸಿರುವ ದೃಶ್ಯ ಕೂಡ ಸೆರೆಯಾಗಿದೆ.

‘ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಹುಲಿ ಮತ್ತು ಚಿರತೆ ಕಾಣಿಸಿಕೊಂಡಿರುವುದು ಕಾಡು ಸಂರಕ್ಷಿಸಿ, ಪ್ರಾಣಿಗಳನ್ನು ಉಳಿಸುವ ಜವಾಬ್ದಾರಿ ಪ್ರತೀಕ‘ ಎಂದು ಈ ದೃಶ್ಯಗಳನ್ನು ಹಂಚಿಕೊಂಡಿರುವ ಜೈವಿಕ ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್‌ ತಿಳಿಸಿದ್ದಾರೆ.

 ರಾಷ್ಟ್ರೀಯ ಉದ್ಯಾನದ ಗಡಿಯಲ್ಲಿ ಕಂಡು ಬಂದ ಹುಲಿ
 ರಾಷ್ಟ್ರೀಯ ಉದ್ಯಾನದ ಗಡಿಯಲ್ಲಿ ಕಂಡು ಬಂದ ಹುಲಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT