ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಕದ್ದಮೆ ರದ್ದು: ಗೊಂದಲದ ಹೇಳಿಕೆ

Last Updated 1 ಆಗಸ್ಟ್ 2019, 20:05 IST
ಅಕ್ಷರ ಗಾತ್ರ

ಬೆಂಗಳೂರು: ಟಿಪ್ಪು ಜಯಂತಿ ಮತ್ತು ಇತರಪ್ರಕರಣಗಳಲ್ಲಿ ಹಿಂದೂ ಯುವಕರ ವಿರುದ್ಧ ದಾಖಲಿಸಿರುವ ಮೊಕದ್ದಮೆಗಳನ್ನು ಸರ್ಕಾರ ಹಿಂದಕ್ಕೆ ಪಡೆದಿದೆ ಎನ್ನಲಾದ ಹೇಳಿಕೆಗಳ ಬಗ್ಗೆ ಗೊಂದಲ ಸೃಷ್ಟಿಯಾಗಿದೆ.

ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗಿದೆ ಎಂದುಬಿಜೆಪಿಯ ಹಿರಿಯ ಶಾಸಕ ಕೆ.ಎಸ್‌.ಈಶ್ವರಪ್ಪ ಅವರು ಟ್ವಿಟ್‌ ಮೂಲಕ ಯಡಿಯೂರಪ್ಪ ಅವರನ್ನು ಅಭಿನಂದಿಸಿದ್ದಾರೆ.ಆದರೆ, ‘ಯಾವುದೇ ಮೊಕದ್ದಮೆಗಳನ್ನು ಕೈಬಿಟ್ಟಿಲ್ಲ. ಆದೇಶವನ್ನೂ ಹೊರಡಿಸಿಲ್ಲ’ ಎಂದು ಗೃಹ ಕಾರ್ಯದರ್ಶಿ ರಜನೀಶ್‌ ಗೋಯಲ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ಹಲವು ಪ್ರಕರಣಗಳಲ್ಲಿ ಅಮಾಯಕ ಹಿಂದೂ ಯುವಕರ ವಿರುದ್ಧ ಮೊಕದ್ದಮೆಗಳನ್ನು ದಾಖಲಿಸಲಾಗಿತ್ತು, ಅವುಗಳನ್ನು ಕೈ ಬಿಡಬೇಕು ಎಂದು ಕೆ.ಜಿ.ಬೋಪಯ್ಯ, ಆರಗ ಜ್ಞಾನೇಂದ್ರ ಮತ್ತಿತರ ಶಾಸಕರು ಮುಖ್ಯಮಂತ್ರಿಯವರಿಗೆ ಮನವಿ ಪತ್ರ ಸಲ್ಲಿಸಿದ್ದರು. ಸುಮಾರು 2,000 ಕ್ಕೂ ಹೆಚ್ಚು ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ಮೊಕದ್ದಮೆಗಳನ್ನು ಕೈಬಿಡಲಾಗಿದೆ ಎಂದು ಬಿಜೆಪಿ ಶಾಸಕರು ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT