ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವವರು ಮತ್ತು ಸೇವಿಸುತ್ತಿರುವವರ ವಿರುದ್ಧ ಜನರೇ ದೂರು ದಾಖಲಿಸುತ್ತಿದ್ದು, ಎರಡು ತಿಂಗಳಲ್ಲಿ 123 ಪ್ರಕರಣ ದಾಖಲಾಗಿದೆ.

ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಸೇವನೆ ತಡೆಗೆ ಆರೋಗ್ಯ ಇಲಾಖೆಯ ರಾಜ್ಯ ತಂಬಾಕು ನಿಯಂತ್ರಣ ಘಟಕ ‘ಟೊಬ್ಯಾಕೊ ಮಾನಿಟರಿಂಗ್’ ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಿದೆ. ಈ ಆ್ಯಪ್ ಅನ್ನು ಕಳೆದ ಫೆಬ್ರವರಿ ಅಂತ್ಯಕ್ಕೆ ಲೋಕಾರ್ಪಣೆ ಮಾಡಲಾಗಿತ್ತು. ಸಾರ್ವಜನಿಕರು ತಮ್ಮ ಮೊಬೈಲ್ ಮೂಲಕ ಛಾಯಾಚಿತ್ರಗಳನ್ನು ತೆಗೆದು, ಅಪ್ಲೋಡ್ ಮಾಡುವ ಅವಕಾಶ ಇದರಲ್ಲಿ ಇದೆ. ಈ ಛಾಯಾಚಿತ್ರದ ಆಧಾರದಲ್ಲಿ ರಾಜ್ಯ ತಂಬಾಕು ನಿಯಂತ್ರಣ ಘಟಕ ಪ್ರಕರಣ ದಾಖಲಿಸಿಕೊಳ್ಳುತ್ತಿದೆ.

ದೂರಿನ ಆಧಾರದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತಂಡ ಸ್ಥಳಕ್ಕೆ ಭೇಟಿ ನೀಡಿ, ಕೋಟ್ಪಾ ಕಾಯಿದೆ ಅನುಸಾರ ಕ್ರಮ ಕೈಗೊಳ್ಳುತ್ತಿದೆ. ದಾಖಲಾದ ಪ್ರಕರಣಗಳಲ್ಲಿ ಹೆಚ್ಚಿನವು ಬೆಂಗಳೂರಿನಿಂದಲೇ ವರದಿಯಾಗಿವೆ. ಈ ಕಾರ್ಯಕ್ಕೆ ವೈದ್ಯಾಧಿಕಾರಿ, ಪೊಲೀಸ್ ಅಧಿಕಾರಿ ಸೇರಿ 7 ಸದಸ್ಯರ ತಂಡ ರಚಿಸಲಾಗಿದೆ. ಆ್ಯಪ್ ಜಿಪಿಎಸ್ ತಂತ್ರಜ್ಞಾನವನ್ನು ಆಧರಿಸಿದೆ. ಹೀಗಾಗಿ, ಛಾಯಾಚಿತ್ರ ತೆಗೆದ ಸ್ಥಳ ಸ್ವಯಂ ಚಾಲಿತವಾಗಿ ದಾಖಲಾಗುತ್ತಿದೆ. ಕೋಟ್ಪಾ ಕಾಯ್ದೆ ಉಲ್ಲಂಘಿಸಿ, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಪ್ರತಿ ವ್ಯಕ್ತಿಗೆ ₹ 200ರಂತೆ ದಂಡ ವಿಧಿಸಲಾಗುತ್ತಿದೆ. ಧೂಮಪಾನ ಹಾಗೂ ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿರುವವರಿಗೂ ಇಷ್ಟೇ ಮೊತ್ತದ ದಂಡ ಹಾಕಲಾಗುತ್ತಿದೆ.

ಸೇವನೆ ಹೆಚ್ಚಳ: ತಂಬಾಕು ಉತ್ಪನ್ನಗಳ ಬಳಕೆಯು ಕ್ಯಾನ್ಸರ್ ಸೇರಿ ವಿವಿಧ ಅನಾರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ರಾಜ್ಯದ 7 ಕೋಟಿ ಜನರಲ್ಲಿ 3 ಕೋಟಿ ಮಂದಿ ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಾರೆ. ಈ ಉತ್ಪನ್ನಗಳನ್ನು ಬಳಸುತ್ತಿರುವ ಶೇ 22.8ರಷ್ಟು ವಯಸ್ಕರಲ್ಲಿ ಶೇ 8.8ರಷ್ಟು ಮಂದಿ ಧೂಮಪಾನಿಗಳಾಗಿದ್ದಾರೆ. ಶೇ 16.3ರಷ್ಟು ಮಂದಿ ಧೂಮಪಾನರಹಿತ ತಂಬಾಕು ಉತ್ಪನ್ನಗಳನ್ನು ಬಳಸುತ್ತಿದ್ದಾರೆ. ತಂಬಾಕು ಉತ್ಪನ್ನ ಬಳಸುವ ಯುವಜನರಲ್ಲಿ ಹೆಚ್ಚಿನವರು 15 ವರ್ಷದವರಾಗಿದ್ದಾರೆ.

‘ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್ ಸೇರಿ ವಿವಿಧ ಅನಾರೋಗ್ಯ ಸಮಸ್ಯೆ ಕಾಡುವ ಸಾಧ್ಯತೆ ಇದೆ. ಇಂತಹ ತಂಬಾಕು ಉತ್ಪನ್ನಗಳನ್ನು ಕೆಲವೆಡೆ ಕಾನೂನು ಬಾಹಿರವಾಗಿ ಮಾರಾಟ ಮಾಡಲಾಗುತ್ತಿದೆ. ಅದೇ ರೀತಿ, ಕೆಲವರು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗಿದೆ. ದೂರಿನ ಅನುಸಾರ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಇಲಾಖೆಯ ಜಂಟಿ ಆಯುಕ್ತ (ಯೋಜನೆ) ಡಾ. ಸೆಲ್ವರಾಜನ್ ತಿಳಿಸಿದರು.

ದೂರು ದಾಖಲು ಸುಲಭ

ೂಗಲ್ ಪ್ಲೇ ಸ್ಟೋರ್ನಲ್ಲಿ ‘ಟೊಬ್ಯಾಕೊ ಮಾನಿಟರಿಂಗ್’ ಆ್ಯಪ್ ಲಭ್ಯವಿದೆ. ಈ ಆ್ಯಪ್ ಮೂಲಕ ಸುಲಭವಾಗಿ ದೂರು ದಾಖಲಿಸುವ ಅವಕಾಶ ನೀಡಲಾಗಿದೆ. ನಿಗದಿತ ಸ್ಥಳದಿಂದ ಸೆಲ್ಫಿ ಕೂಡ ಅಪ್ಲೋಡ್ ಮಾಡಬಹುದಾಗಿದೆ. ದಾಖಲಾದ ಪ್ರಕರಣ ಯಾವ ಹಂತದಲ್ಲಿದೆ ಎಂಬ ಮಾಹಿತಿಯೂ ದೊರೆಯುತ್ತದೆ. ನಿಗದಿತ ಸ್ಥಳದ ಫೋಟೊದೊಂದಿಗೆ ದೂರು ದಾಖಲಿಸಿದ ಬಳಿಕ ಆ್ಯಪ್ನಲ್ಲಿ ದೂರಿಗೆ ಸಂಬಂಧಿಸಿದ ಕೆಲವೊಂದು ಪೂರಕ ಮಾಹಿತಿ ಸಲ್ಲಿಸುವ ಅವಕಾಶವಿದೆ. ದೂರು ನೀಡಿದವರ ಮಾಹಿತಿಯನ್ನು ತಂಬಾಕು ನಿಯಂತ್ರಣ ತಂಡ ಗೌಪ್ಯವಾಗಿ ಇಡಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.