ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂಬಾಕು ಸಂಬಂಧಿ ಕ್ಯಾನ್ಸರ್: ಲಕ್ಷ ಪುರುಷರಲ್ಲಿ 40 ಮಂದಿಗೆ ದೃಢ

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಹೇಳಿಕೆ
Last Updated 30 ಮೇ 2021, 20:09 IST
ಅಕ್ಷರ ಗಾತ್ರ

ಬೆಂಗಳೂರು: ಜನಸಂಖ್ಯೆ ಆಧಾರಿತ ಕ್ಯಾನ್ಸರ್ ನೋಂದಣಿ ಪ್ರಕಾರ ನಗರದಲ್ಲಿ ಒಂದು ಲಕ್ಷ ಪುರುಷರಲ್ಲಿ 40 ಮಂದಿ ಹಾಗೂ ಒಂದು ಲಕ್ಷ ಮಹಿಳೆಯರಲ್ಲಿ 20 ಮಂದಿ ತಂಬಾಕು ಸಂಬಂಧಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ತಿಳಿಸಿದೆ.

ಧೂಮಪಾನ ಹಾಗೂ ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಶ್ವಾಸಕೋಶದ ಸಮಸ್ಯೆ ಸೇರಿದಂತೆ ವಿವಿಧ ಕಾಯಿಲೆಗಳು ಕಾಣಿಸಿಕೊಳ್ಳಲಿವೆ. ತಂಬಾಕು ಬಳಕೆಯಲ್ಲಿ ದೇಶವು ಎರಡನೇ ಅತಿ ದೊಡ್ಡ ದೇಶ. ಒಟ್ಟಾರೆ ಜನಸಂಖ್ಯೆಯಲ್ಲಿ ಶೇ 48ರಷ್ಟು ಪುರುಷರು ಹಾಗೂ ಶೇ 20 ರಷ್ಟು ಮಹಿಳೆಯರು ತಂಬಾಕು ಉತ್ಪನ್ನಗಳನ್ನು ಬಳಸುತ್ತಿದ್ದಾರೆ. ಇದು ದೇಹದ ವಿವಿಧ ಅಂಗಾಂಗಗಳ ಮೇಲೆ ನಕಾರಾತ್ಮಕ ಪರಿಣಾಮಗಳನ್ನು ಬೀರುತ್ತದೆ. ಪ್ರತಿ ವರ್ಷ ಕ್ಯಾನ್ಸರ್ ಕಾಯಿಲೆಗೆ ಸಂಬಂಧಿಸಿದಂತೆಕಿದ್ವಾಯಿಯಲ್ಲಿ 3 ಸಾವಿರಕ್ಕೂ ಅಧಿಕ ‍ಪ್ರಕರಣಗಳು ವರದಿಯಾಗುತ್ತಿವೆ ಎಂದು ಸಂಸ್ಥೆ ಹೇಳಿದೆ.

ಜೀವಕ್ಕೆ ಕುತ್ತು:‘ಹೆಚ್ಚಿನವರು ರೋಗ ಉಲ್ಭಣಗೊಂಡ ಬಳಿಕ ಸಂಸ್ಥೆಗೆ ಚಿಕಿತ್ಸೆಗಾಗಿ ಬರುತ್ತಾರೆ. ಕ್ಯಾನ್ಸರ್ ಇರುವುದನ್ನು ಪ್ರಾಥಮಿಕ ಹಂತದಲ್ಲಿಯೇ ಪತ್ತೆಯಾದರೆ ಅಗತ್ಯ ಚಿಕಿತ್ಸೆ ನೀಡಿ, ಗುಣಪಡಿಸಬಹುದು. ತಂಬಾಕು ಸೇವನೆ
ಯಿಂದ ಬರುವ ಕ್ಯಾನ್ಸರ್ ನಿಯಂತ್ರಣಕ್ಕಾಗಿ ಕಾರ್ಯನೀತಿಗಳು ಹಾಗೂ ಕಾರ್ಯತಂತ್ರವನ್ನು ರೂಪಿಸಬೇಕಾಗಿದೆ. ತೆರಿಗೆ ವಿಧಿಸುವುದು, ಜಾಹೀರಾತು ನಿಷೇಧ ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಂಡರೆ ಮಾತ್ರ ತಕ್ಕಮಟ್ಟಿಗೆ ನಿಯಂತ್ರಣಕ್ಕೆ ತರಬಹುದು’ ಎಂದು ಸಂಸ್ಥೆಯ ನಿರ್ದೇಶಕ ಡಾ.ಸಿ. ರಾಮಚಂದ್ರ ತಿಳಿಸಿದರು.

‘ಕೊರೊನಾ ಸೋಂಕು ಕಾಡುತ್ತಿರುವ ಈ ಸಂದರ್ಭದಲ್ಲಿ ಧೂಮಪಾನ ಮತ್ತು ತಂಬಾಕು ಸೇವಿಸುವವರ ಜೀವಕ್ಕೇ ಕುತ್ತು ಉಂಟಾಗುವ ಸಾಧ್ಯತೆಗಳಿವೆ. ಹಾಗಾಗಿ, ತಂಬಾಕು ಉತ್ಪನ್ನಗಳನ್ನು ತ್ಯಜಿಸಿ, ಆರೋಗ್ಯಕಾರಿ ಜೀವನ ವಿಧಾನ ಅಳವಡಿಸಿಕೊಳ್ಳಬೇಕು. ಶ್ವಾಸಕೋಶದ ಸಮಸ್ಯೆ ಅಥವಾ ತೀವ್ರ ಉಸಿರಾಟದ ತೊಂದರೆ ಇರುವ ರೋಗಿಗಳಿಗೆ ಕೋವಿಡ್ ಪರೀಕ್ಷೆ ಅತ್ಯಗತ್ಯ’ ಎಂದು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT