ತಂಬಾಕು ಮಾರಾಟ: ₹ 7 ಸಾವಿರ ದಂಡ
ಬೆಂಗಳೂರು: ಮಲ್ಲೇಶ್ವರದಲ್ಲಿ ಶಾಲಾ–ಕಾಲೇಜುಗಳಿಂದ 100 ಮೀ. ವ್ಯಾಪ್ತಿಯೊಳಗೆ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಬಿಬಿಎಂಪಿ ಅಧಿಕಾರಿಗಳು ಪೊಲೀಸರ ನೆರವಿನೊಂದಿಗೆ ಮಂಗಳವಾರ ದಿಢೀರ್ ದಾಳಿ ನಡೆಸಿದರು.
ಗುಟ್ಕಾ, ಬೀಡಿ, ಸಿಗರೇಟು ಮೊದಲಾದ ತಂಬಾಕು ಉತ್ಪನ್ನಗಳನ್ನು ಮಾರಾಟಕ್ಕಿಟ್ಟದ್ದ ಏಳು ಅಂಗಡಿಗಳಿಗೆ ಅಧಿಕಾರಿಗಳು ದಂಡ ವಿಧಿಸಿದರು.
‘ಮಲ್ಲೇಶ್ವರದ ಸಂಪಿಗೆ ರಸ್ತೆ, 11ನೇ ಅಡ್ಡ ರಸ್ತೆ, 15ನೇ ಅಡ್ಡ ರಸ್ತೆ ಹಾಗೂ ರೈಲ್ವೆ ಸಮಾನಾಂತರ ರಸ್ತೆಗಳಲ್ಲಿ ಒಟ್ಟು 7 ಮಳಿಗೆಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಕಂಡುಬಂದಿದೆ. ಅಂಗಡಿ ಮಾಲೀಕರಿಗೆ ಒಟ್ಟು ₹7 ಸಾವಿರ ದಂಡ ವಿಧಿಸಿದ್ದಲ್ಲದೇ, ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದೇವೆ. ತಂಬಾಕು ಉತ್ಪನ್ನ ಮಾರಾಟ ಮುಂದುವರಿಸಿದಲ್ಲಿ, ಪರವಾನಗಿ ರದ್ದುಪಡಿಸಿ, ಮಳಿಗೆಯನ್ನು ಮುಚ್ಚಿಸುತ್ತೇವೆ’ ಎಂದು ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾಗಿ ಪಶ್ಚಿಮ ವಲಯದ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ‘ಪ್ರಜಾವಾಣಿ’ಗೆ ತಿಳಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.