ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆ ಬಳಿ ತಂಬಾಕು; 17 ಎಫ್‌ಐಆರ್ ದಾಖಲು

Last Updated 26 ಅಕ್ಟೋಬರ್ 2021, 2:50 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಪಶ್ಚಿಮ ವಿಭಾಗ ವ್ಯಾಪ್ತಿಯ ಶಾಲೆಗಳ ಆವರಣ ಬಳಿಯೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ 17 ಅಂಗಡಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ನಗರದಲ್ಲಿ ಸೋಮವಾರದಿಂದ ಶಾಲೆಗಳು ಆರಂಭವಾಗಿದ್ದು, ಇದರ ಬೆನ್ನಲ್ಲೇ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಶಾಲೆ ಸುತ್ತಲಿನ 100 ಮೀಟರ್‌ ಪ್ರದೇಶದಲ್ಲಿದ್ದ ಅಂಗಡಿಗಳಲ್ಲಿ ತಪಾಸಣೆ ನಡೆಸಿದರು.

‘ಚಾಮರಾಜಪೇಟೆ, ಸಿಟಿ ಮಾರ್ಕೆಟ್, ಕಲಾಸಿಪಾಳ್ಯ, ಉಪ್ಪಾರಪೇಟೆ, ಕಾಟನ್‌ಪೇಟೆ, ಜಗಜೀವನ್‌ರಾಮ್ ನಗರ, ಬ್ಯಾಟರಾಯನಪುರ, ಚಂದ್ರಾಲೇಔಟ್, ಜ್ಞಾನಭಾರತಿ, ಕೆಂಗೇರಿ, ರಾಜರಾಜೇಶ್ವರಿನಗರ, ಅನ್ನಪೂರ್ಣೇಶ್ವರಿನಗರ, ವಿಜಯನಗರ, ಮಾಗಡಿ ರಸ್ತೆ, ಕೆ.‍ಪಿ. ಅಗ್ರಹಾರ, ಕಾಮಾಕ್ಷಿಪಾಳ್ಯ, ಬಸವೇಶ್ವರನಗರ ಹಾಗೂ ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಯಿತು’ ಎಂದು ಡಿಸಿಪಿ ಸಂಜೀವ್ ಪಾಟೀಲ ಹೇಳಿದರು.

‘ತಂಬಾಕು ಉತ್ಪನ್ನ ಮಾರುತ್ತಿದ್ದ 304 ಮಂದಿಗೆ ಸ್ಥಳದಲ್ಲೇ ನೋಟಿಸ್ ನೀಡಿ, ₹ 52,750 ದಂಡ ವಿಧಿಸಲಾಗಿದೆ. 17 ಅಂಗಡಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ಕಾನೂನು ಕ್ರಮ ಜರುಗಿಸಲಾಗಿದೆ. ಕಾರ್ಯಾಚರಣೆ ಮುಂದುವರಿಯಲಿದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT