ಬೆಂಗಳೂರು: ನಿಮ್ಮ ಬಡಾವಣೆಯ ಬೀದಿ ದೀಪಗಳು ಕಾರ್ಯನಿರ್ವಹಿಸುತ್ತಿಲ್ಲವೇ?, ರಸ್ತೆಗಳಲ್ಲಿ ಗುಂಡಿಗಳು ಬಿದ್ದು, ಹಾಳಾಗಿವೆಯೇ?, ಹಸಿರು ಕಣ್ಮರೆ ಆಗುತ್ತಿರುವುದು ಕಳವಳ ತಂದಿದೆಯೇ? ಕಸ ವಿಲೇವಾರಿ ಸಮಸ್ಯೆ ಇದೆಯೇ?, ಸಂಚಾರ ಸಮಸ್ಯೆಯೇ?

ಹಾಗಾದರೆ, ಶನಿವಾರ (ಜನವರಿ 5 ರಂದು)ಪಾಟರಿ ಟೌನ್‌ನ ಫೆದರ್‌ಲೈಟ್ ಪಾಟರಿ ಟೌನ್ ಗವರ್ನಮೆಂಟ್ ಹೈಸ್ಕೂಲ್ ಮೈದಾನಕ್ಕೆ ಬನ್ನಿ.ಬೆಳಿಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಗಳ ಆಶ್ರಯದಲ್ಲಿ ಪುಲಕೇಶಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ.

ಕ್ಷೇತ್ರದ ಕುಂದುಕೊರತೆಗಳ ಕುರಿತ ನಿಮ್ಮ ಅಹವಾಲುಗಳನ್ನು ನೇರವಾಗಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಬಳಿ ಹೇಳಿಕೊಂಡು ಸ್ಥಳದಲ್ಲೇ ಪರಿಹಾರ ಪಡೆಯಬಹುದು.

ಕ್ಷೇತ್ರದ ಶಾಸಕರು, ವಾರ್ಡ್‌ಗಳ ಪಾಲಿಕೆ ಸದಸ್ಯರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜ.5 ರಂದು ಬೆಳಿಗ್ಗೆ 9ರಿಂದ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು. ಕುಂದು ಕೊರತೆಗಳನ್ನು ಮುಂಚಿತವಾಗಿ janaspandana@printersmysore.co.inಗೆ ಇ–ಮೇಲ್ ಮಾಡಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.