ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಟೋಯಿಂಗ್: ​ 70ಕ್ಕೂ ಅಧಿಕ ಪ್ರಕರಣ ದಾಖಲು

Published : 1 ಸೆಪ್ಟೆಂಬರ್ 2024, 16:18 IST
Last Updated : 1 ಸೆಪ್ಟೆಂಬರ್ 2024, 16:18 IST
ಫಾಲೋ ಮಾಡಿ
Comments

ಬೆಂಗಳೂರು: ನಿಷೇಧಿತ ಸ್ಥಳಗಳಲ್ಲಿ ನಿಲ್ಲಿಸುವ ವಾಹನಗಳನ್ನು ಕೊಂಡೊಯ್ಯುವ ‘ಟೋಯಿಂಗ್’ ಕಾರ್ಯಾಚರಣೆಯ ಎರಡನೇ ದಿನವಾದ ಭಾನುವಾರ ನಗರದಲ್ಲಿ 70ಕ್ಕೂ ಅಧಿಕ ಪ್ರಕರಣ ದಾಖಲಿಸಲಾಗಿದೆ.

ಎರಡೂವರೆ ವರ್ಷದ ಬಳಿಕ ಮತ್ತೆ ಉಪ್ಪಾರಪೇಟೆ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಟೋಯಿಂಗ್ ಕಾರ್ಯಾಚರಣೆ ಆರಂಭಿಸಲಾಗಿದೆ. ಎರಡೇ ದಿನಕ್ಕೆ ಟೋಯಿಂಗ್ ಮಾಡಿದ ವಾಹನಗಳ ಸಂಖ್ಯೆ ಶತಕ ದಾಟಿದೆ. ‌ಮೊದಲ ದಿನ 30 ಟೋಯಿಂಗ್ ಪ್ರಕರಣಗಳು ದಾಖಲಾಗಿದ್ದವು.

ಟೋಯಿಂಗ್​​ಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದಲೇ ಎರಡು ವಾಹನ ಪೂರೈಕೆ ಮಾಡಲಾಗಿದೆ. ಆರಂಭದಲ್ಲಿ ಧ್ವನಿವರ್ಧಕಗಳ ಮೂಲಕ ಸೂಚನೆ ನೀಡಲಾಗುತ್ತದೆ. ಆದರೂ ನಿರ್ಬಂಧಿತ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಿದರೆ ಟೋಯಿಂಗ್ ಮಾಡಲಾಗುತ್ತದೆ. ಟೋಯಿಂಗ್​ಗೆ ಶುಲ್ಕ ವಿಧಿಸುತ್ತಿಲ್ಲ.

ಗಾಂಧಿನಗರ ಮತ್ತು ಇತರ ಪ್ರದೇಶಗಳಲ್ಲಿ ನಿಯಮ ಉಲ್ಲಂಘಿಸಿ ನಿಲುಗಡೆ ಮಾಡಿದ ವಾಹನಗಳನ್ನು ತೆರವುಗೊಳಿಸುವತ್ತ ಗಮನಹರಿಸಲಾಗುತ್ತಿದೆ.

ವಾಹನ ಸವಾರರು ಸ್ವಾತಂತ್ರ್ಯ ಉದ್ಯಾನದಲ್ಲಿರುವ ಹೊಸ ಪಾರ್ಕಿಂಗ್ ಸಂಕೀರ್ಣ ಬಳಸಿಕೊಳ್ಳಲು ಮತ್ತು ನಿಷೇಧಿತ ಪ್ರದೇಶಗಳಲ್ಲಿ ಅಥವಾ ರಸ್ತೆಗಳಲ್ಲಿ ವಾಹನ ನಿಲುಗಡೆ ಮಾಡದಂತೆ ಸೂಚನೆ ನೀಡಲಾಗಿದೆ. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT