ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಿಯಮ ಪ್ರಕಾರವೇ ಟೋಲ್‌ ದರ ಹೆಚ್ಚಳ: ನೈಸ್‌ ಸ್ಪಷ್ಟನೆ

Published : 7 ಆಗಸ್ಟ್ 2024, 23:12 IST
Last Updated : 7 ಆಗಸ್ಟ್ 2024, 23:12 IST
ಫಾಲೋ ಮಾಡಿ
Comments

ಬೆಂಗಳೂರು: ನೈಸ್‌ ರಸ್ತೆಯಲ್ಲಿ ಟೋಲ್‌ ದರಗಳನ್ನು ನಿಯಮ ಪ್ರಕಾರವೇ ಹೆಚ್ಚಿಸಲಾಗಿದೆ ಎಂದು ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್ (ನೈಸ್‌) ಲಿಮಿಟೆಡ್ ಸ್ಪಷ್ಟನೆ ನೀಡಿದೆ.

ಟೋಲ್‌ ದರದ ಬಗ್ಗೆ ನೈಸ್‌ ಸಂಸ್ಥೆಯು 2020ರಲ್ಲಿ ಕರ್ನಾಟಕ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿತ್ತು. ಈ ಒಪ್ಪಂದದ ಪ್ರಕಾರ ದರ ಪರಿಷ್ಕರಣೆ ಮಾಡುವ ಸಂದರ್ಭದಲ್ಲಿ ಅದರ ವಿವರಗಳನ್ನು ಲೋಕೋಪಯೋಗಿ ಇಲಾಖೆಗೆ (ಪಿಡಬ್ಲ್ಯುಡಿ) ತಿಳಿಸಿ, ಒಪ್ಪಿಗೆ ಪಡೆಯಬೇಕು. ಅನುಮತಿಗಾಗಿ ಅರ್ಜಿ ಸಲ್ಲಿಸಿ 30 ದಿನಗಳಲ್ಲಿ ಇಲಾಖೆಯಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದರೆ ನೇರವಾಗಿ ದರ ಹೆಚ್ಚಿಸಲು ಅವಕಾಶ ನೀಡಲಾಗಿದೆ ಎಂದು ನೈಸ್‌ ಪ್ರಕಟಣೆಯಲ್ಲಿ ತಿಳಿಸಿದೆ.

ಒಪ್ಪಂದದ ಪ್ರಕಾರ 2023ರಲ್ಲಿ ಟೋಲ್‌ ಹೆಚ್ಚಿಸಬೇಕಿತ್ತು. ಅದಕ್ಕೆ ಸಂಬಂಧಿಸಿದಂತೆ  ಅನುಮತಿಗಾಗಿ ಪಿಡಬ್ಲ್ಯುಡಿಗೆ 2022ರ ನವೆಂಬರ್‌ನಲ್ಲಿ ಪ‍ತ್ರ ಬರೆಯಲಾಗಿತ್ತು. 2024ರ ಜುಲೈ 1ರಿಂದ ದರ ಏರಿಸಲಾಗಿದೆ. ಆದರೆ, ಇಲಾಖೆಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಪಿಡಬ್ಲ್ಯುಡಿ ಅಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದಾರೆ ಎಂದು ನೈಸ್‌ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT