ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿ–ಮತ ಬದಿಗಿಟ್ಟು ಪ್ರತಿಭೆಗೆ ಸ್ಥಾನ ನೀಡಿ: ಶಿಕ್ಷಣತಜ್ಞ ಕೆ.ಪಿ.ಪುತ್ತೂರಾಯ

Last Updated 29 ಜನವರಿ 2021, 18:59 IST
ಅಕ್ಷರ ಗಾತ್ರ

ಯಲಹಂಕ:‘ದೇಶ ಅಭಿವೃದ್ಧಿ ಪಥದಲ್ಲಿ ಸಾಗಲು ಜಾತಿ-ಮತ, ವರ್ಣ ಮತ್ತು ಧರ್ಮಗಳನ್ನು ಬದಿಗಿಡಬೇಕು. ವ್ಯಕ್ತಿಯ ಅರ್ಹತೆ ಹಾಗೂ ಪ್ರತಿಭೆಗಳನ್ನು ಗುರುತಿಸಿ ಅರ್ಹ ಹುದ್ದೆಗಳಿಗೆ ಸೂಕ್ತ ವ್ಯಕ್ತಿಗಳನ್ನು ನೇಮಿಸಬೇಕು’ ಎಂದು ಶಿಕ್ಷಣತಜ್ಞ ಕೆ.ಪಿ.ಪುತ್ತೂರಾಯ ತಿಳಿಸಿದರು.

ಎಸ್ಸೆಸ್ಸೆಲ್ಸಿಯಲ್ಲಿರ್‍ಯಾಂಕ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ದ್ವಿತೀಯ ಪಿಯುರ್‍ಯಾಂಕ್ ವಿದ್ಯಾರ್ಥಿಗಳಿಗೆ ಇಲ್ಲಿನ ಶೇಷಾದ್ರಿಪುರ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪ್ರತಿಭೆಗೆ ಯಾವುದೇ ಜಾತಿ, ಬಡತನ ಅಡ್ಡಿ ಬರುವುದಿಲ್ಲ. ಜೀವನದಲ್ಲಿ ಆಸಕ್ತಿ ಮತ್ತು ಅಭಿರುಚಿಗೆ ಅನುಗುಣವಾಗಿ ದೊಡ್ಡ ಕನಸು ಕಾಣಬೇಕು. ಪ್ರಾಮಾಣಿಕತೆ, ಮಾನವೀಯತೆ, ಕಠಿಣ ಪರಿಶ್ರಮ ಹಾಗೂ ಛಲದ ಗುಣಗಳನ್ನು ಮೈಗೂಡಿಸಿಕೊಂಡರೆ ಯಶಸ್ಸು ಕಟ್ಟಿಟ್ಟಬುತ್ತಿ’ ಎಂದರು.

ಶಿಕ್ಷಣ ತಜ್ಞ ವೂಡೇ.ಪಿ.ಕೃಷ್ಣ, ‘ಶೇಷಾದ್ರಿಪುರ ಶಿಕ್ಷಣ ಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ 37 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಮೂಲಕ ಅವರ ಪ್ರತಿಭೆಯನ್ನು ಗೌರವಿಸಲಾಗಿದೆ. ಒಳ್ಳೆಯ ಚಿಂತನೆಗಳನ್ನು ಮೈಗೂಡಿಸಿಕೊಂಡರೆ, ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿ’ ಎಂದು ಹೇಳಿದರು.

ಶೇಷಾದ್ರಿಪುರ ಶಿಕ್ಷಣ ದತ್ತಿಯ ಜಂಟಿ ಕಾರ್ಯದರ್ಶಿ ಎಸ್.ಶೇಷ ನಾರಾಯಣ, ಟ್ರಸ್ಟಿ ಅಶೋಕ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT