ಬೆಂಗಳೂರು: ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾದ ‘ಟೊಟೊ ಪುರಸ್ಕಾರ’ಕ್ಕೆ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ.
ಈ ಪ್ರಶಸ್ತಿಯನ್ನು ಟಿ.ಎಫ್.ಎ. (ಟೊಟೊ ಫಂಡ್ಸ್ ದಿ ಆರ್ಟ್ಸ್) ಸ್ಥಾಪಿಸಿದೆ. ಸೃಜನಶೀಲ ಯುವ ಬರಹಗಾರರಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಈ ಪುರಸ್ಕಾರ ಸ್ಥಾಪಿಸಲಾಗಿದ್ದು, ನಗದು ಬಹುಮಾನವನ್ನು ₹ 60 ಸಾವಿರಕ್ಕೆ ಏರಿಕೆ ಮಾಡಲಾಗಿದೆ.
ಭಾರತೀಯ ನಾಗರಿಕರಿಗೆ ಮಾತ್ರ ಅವಕಾಶ ಇರಲಿದ್ದು, ಬರಹಗಾರರು 18 ರಿಂದ 29 ವರ್ಷ ವಯಸ್ಸಿನವರಾಗಿರಬೇಕು. ಕಥೆ, ಕವಿತೆ ಅಥವಾ ನಾಟಕ ಪ್ರಕಾರದಲ್ಲಿ ಪ್ರವೇಶಗಳನ್ನು ಕಳಿಸಬಹುದು. ಈ ಮೂರು ಪ್ರಕಾರಗಳಿಂದ ಒಬ್ಬರನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಲಾಗುತ್ತದೆ.
ಪ್ರವೇಶಗಳನ್ನು ಕಳುಹಿಸಲು ಸೆ.20 ಕೊನೆ ದಿನವಾಗಿದ್ದು, ವಿವರಗಳಿಗೆ http://totofundsthearts.blogspot.in/ ನೋಡಬಹುದು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.