ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಸೋದ್ಯಮ ಅಭಿವೃದ್ಧಿಗೆ ಸಾರಿಗೆ ಇಲಾಖೆ ಸಹಭಾಗಿತ್ವ

Last Updated 17 ಫೆಬ್ರುವರಿ 2021, 22:03 IST
ಅಕ್ಷರ ಗಾತ್ರ

ಬೆಂಗಳೂರು: ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವಾಹನಗಳಿಗೆ ಹೈ ಸ್ಪೀಡ್‌ ಡೀಸೆಲ್‌ ಪೂರೈಕೆ, ತೆರೆದ ಚಾವಣಿಯ ಅನುಪಯುಕ್ತ ಬಸ್‌ಗಳನ್ನು ಒದಗಿಸುವುದು, ಬಸ್‌ ನಿಲುಗಡೆಗೆ ಸ್ಥಳಾವಕಾಶ ಕಲ್ಪಿಸುವುದು ಸೇರಿದಂತೆ ಪ್ರವಾಸೋದ್ಯಮ ಅಭಿವೃದ್ಧಿಗೆ ಅಗತ್ಯವಿರುವ ಸಹಕಾರ ನೀಡುವಂತೆ ರಾಜ್ಯದ ಎಲ್ಲ ಸಾರಿಗೆ ನಿಗಮಗಳಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸೂಚನೆ ನೀಡಿದರು.

ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಸಾರಿಗೆ ನಿಗಮಗಳು ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ನಿಗಮಗಳು ಸಮನ್ವಯದಿಂದ ಕಾರ್ಯನಿರ್ವಹಿಸುವುದಕ್ಕೆ ಪೂರಕವಾಗಿ ಬುಧವಾರ ವಿಕಾಸಸೌಧದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಸಾರಿಗೆ ಸಚಿವರೂ ಆಗಿರುವ ಸವದಿ, ಈ ಸಂಬಂಧ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆಗಳನ್ನು ನೀಡಿದರು.

ಪೀಣ್ಯದಲ್ಲಿರುವ ಸಾರಿಗೆ ಇಲಾಖೆಯ ಜಮೀನಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಬೇಕೆಂಬ ಕೋರಿಕೆ ಕುರಿತು ಸ್ಥಳ ಪರಿಶೀಲಿಸಿ ತೀರ್ಮಾನ ಕೈಗೊಳ್ಳುವಂತೆ ಸಚಿವರು ನಿರ್ದೇಶನ ನೀಡಿದರು. ಅನುಪಯುಕ್ತವಾಗಿ ನಿಂತಿರುವ ತೆರೆದ ಚಾವಣಿಯ ಬಸ್‌ಗಳನ್ನು ವಾರದೊಳಗೆ ಕಡಿಮೆ ದರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ನಿಗಮಕ್ಕೆ ಹಸ್ತಾಂತರಿಸುವಂತೆಯೂ ಸೂಚಿಸಿದರು ಎಂದು ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರುತಿ ತಿಳಿಸಿದ್ದಾರೆ.

ನಿಗಮದ ವಾಹನಗಳಿಗೂ ಹೈಸ್ಪೀಡ್‌ ಡೀಸೆಲ್‌ ಒದಗಿಸಲು ಸಚಿವರು ಸೂಚಿಸಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ನೀಡಬೇಕೆಂಬ ಬೇಡಿಕೆ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT