ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲ ಸಚಿವರಿಗೆ ₹ 30 ಲಕ್ಷ ಮೌಲ್ಯದ ಟೊಯೊಟಾ ಇನ್ನೋವಾ ಕ್ರಿಸ್ಟಾ ಕಾರು!

Published 1 ಸೆಪ್ಟೆಂಬರ್ 2023, 16:26 IST
Last Updated 1 ಸೆಪ್ಟೆಂಬರ್ 2023, 16:26 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಎಲ್ಲ 33 ಸಚಿವರಿಗೆ ತಲಾ ₹30 ಲಕ್ಷ ಮೌಲ್ಯದ ನೂತನ ಟೊಯೊಟಾ ಇನ್ನೋವಾ ಹೈಕ್ರಾಸ್‌–ಹೈಬ್ರಿಡ್‌ ಕಾರುಗಳನ್ನು ನೇರವಾಗಿ ಖರೀದಿಸಲು ಅನುಮತಿ ನೀಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.

ಎಲ್ಲ ಸಚಿವರಿಗೂ ಟೊಯೊಟಾ ಇನ್ನೋವಾ ಕ್ರಿಸ್ಟಾ ಕಾರುಗಳನ್ನು ಒದಗಿಸಲಾಗಿದೆ. ಅವುಗಳನ್ನು ಬದಲಿಸಿ ಇತ್ತೀಚೆಗಷ್ಟೇ ಮಾರುಕಟ್ಟೆಗೆ ಬಂದಿರುವ ಇನ್ನೋವಾ ಹೈಕ್ರಾಸ್‌– ಹೈಬ್ರಿಡ್‌ ಕಾರುಗಳನ್ನು ನೀಡಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ನಿರ್ಧರಿಸಿದೆ.

33 ಕಾರುಗಳನ್ನು ತಲಾ ₹ 30 ಲಕ್ಷ ದರದಲ್ಲಿ ಟೊಯೊಟಾ ಕಿರ್ಲೋಸ್ಕರ್‌ ಮೋಟಾರ್‌ ಪ್ರೈವೇಟ್‌ ಲಿಮಿಟೆಡ್‌ನಿಂದ ನೇರವಾಗಿ ಖರೀದಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಕಾಯ್ದೆ (ಕೆಟಿಪಿಪಿ) ಸೆಕ್ಷನ್‌ 4–ಜಿ ಅಡಿಯಲ್ಲಿ ವಿನಾಯಿತಿ ನೀಡಿ ಆರ್ಥಿಕ ಇಲಾಖೆ ಮಂಗಳವಾರ ಆದೇಶ ಹೊರಡಸಿದೆ.

ಸಚಿವರಿಗೆ ಹೊಸ ಕಾರುಗಳ ಖರೀದಿಗಾಗಿ ಒಟ್ಟು ₹ 9.90 ಕೋಟಿ ವೆಚ್ಚ ಮಾಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT