ಬೆಂಗಳೂರು: ‘ಯಾವುದೇ ಕಾರಣಕ್ಕೂ ಕಾರ್ಮಿಕ ಕಾನೂನುಗಳನ್ನು ಸಡಿಲಗೊಳಿಸಬಾರದು. ಹೀಗೆ ಮಾಡುವುದರಿಂದ ಈಗಾಗಲೇ ಇರುವ ಕೈಗಾರಿಕೆಗಳಿಗೆ ಮತ್ತು ಕಾರ್ಮಿಕರಿಗೆ ತೊಂದರೆಯಾಗುತ್ತದೆ. ರಾಜ್ಯವೂ ಆರ್ಥಿಕ ಕುಸಿತಕ್ಕೆ ಒಳಗಾಗುತ್ತದೆ’ ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಹೇಳಿದೆ.

ಸಮಿತಿಯ ನಿಯೋಗವು ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಭೇಟಿ ಮಾಡಿ ಈ ಕುರಿತು ಮನವಿ ಪತ್ರ ಸಲ್ಲಿಸಿತು.

‘ಅಸಂಘಟಿತ ಕಾರ್ಮಿಕರಿಗೆ ಘೋಷಿಸಿರುವ ₹5 ಸಾವಿರ ನೆರವನ್ನು ಕೂಡಲೇ ನೀಡಬೇಕು. ವಿಳಂಬ ಮಾಡಬಾರದು’ ಎಂದೂನಿಯೋಗ ಮನವಿ ಮಾಡಿತು.

‘ಕೆಲಸದ ಅವಧಿಯನ್ನು ಹೆಚ್ಚಿಸುವುದು, ಕಾರ್ಮಿಕರ ಗುತ್ತಿಗೆ ಪ್ರಮಾಣ ಜಾಸ್ತಿ ಮಾಡುವುದು ಸೇರಿದಂತೆ ಮಾಲೀಕರ ಒತ್ತಡಕ್ಕೆ ಮಣಿದು ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಹೊರಟಿದೆ. ಇಂತಹ ಕ್ರಮಗಳನ್ನು ಕೈಬಿಡಬೇಕು’ ಎಂದು ನಿಯೋಗ ಮನವಿ ಮಾಡಿತು.

ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಸದಸ್ಯರಾದ ಶಾಮಣ್ಣ ರೆಡ್ಡಿ, ವಿಜಯಭಾಸ್ಕರ್, ಎಸ್. ವರಲಕ್ಷ್ಮಿ, ಮೀನಾಕ್ಷಿ ಸುಂದರಂ, ಮೈಕಲ್ ಫರ್ನಾಂಡಿಸ್, ಕೆ.ವಿ. ಭಟ್, ಎನ್.ಪಿ. ಸ್ವಾಮಿ ನಿಯೋಗದಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.