ಭಾನುವಾರ, ಮಾರ್ಚ್ 7, 2021
22 °C

ಬೆಂಗಳೂರು: ಒಂದೇ ದಿನದಲ್ಲಿ ₹18.61 ಲಕ್ಷ ದಂಡ ಸಂಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ವೈರಾಣು ಹರಡುವಿಕೆ ತಡೆಗಾಗಿ ಜಾರಿಗೊಳಿಸಿದ್ದ ಲಾಕ್‌ಡೌನ್‌ ಹಾಗೂ ನಿಷೇಧಾಜ್ಞೆ ವೇಳೆಯಲ್ಲಿ ನಿಯಮ ಉಲ್ಲಂಘಿಸಿದ್ದಕ್ಕಾಗಿ ಜಪ್ತಿ ಮಾಡಿದ್ದ ವಾಹನಗಳ ಹಸ್ತಾಂತರ ಪ್ರಕ್ರಿಯೆ ಮುಂದುವರಿದಿದ್ದು, ಸಂಚಾರ ನಿಯಮ ಉಲ್ಲಂಘನೆ ಹಳೇ ಪ್ರಕರಣಗಳಲ್ಲಿ ಶನಿವಾರ ಒಂದೇ ದಿನದಲ್ಲೇ ₹18.61 ಲಕ್ಷ ದಂಡ ಸಂಗ್ರಹಿಸಲಾಗಿದೆ.

ನಗರದ ಪ್ರತಿಯೊಂದು ಠಾಣೆ ವ್ಯಾಪ್ತಿಯಲ್ಲೂ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಹೈಕೋರ್ಟ್‌ ನಿರ್ದೇಶನದಂತೆ ನಿಗದಿತ ಶುಲ್ಕ ಕಟ್ಟಿಸಿಕೊಂಡು ದಾಖಲೆಗಳ ಪರಿಶೀಲನೆ ನಡೆಸಿ ಪೊಲೀಸರು, ವಾಹನಗಳನ್ನು ಮಾಲೀಕರಿಗೆ ಹಸ್ತಾಂತರಿಸುತ್ತಿದ್ದಾರೆ.

ಲಾಕ್‌ಡೌನ್‌ ಹಾಗೂ ನಿಷೇಧಾಜ್ಞೆ ನಿಯಮ ಉಲ್ಲಂಘನೆ ಜೊತೆಗೆಯೇ, ಹಳೇ ಸಂಚಾರ ನಿಯಮಗಳ ಉಲ್ಲಂಘನೆ ದಂಡವನ್ನೂ ಇದೇ ಸಂದರ್ಭದಲ್ಲಿ ವಸೂಲಿ ಮಾಡಲಾಗುತ್ತಿದೆ. ಶುಕ್ರವಾರ 1634 ವಾಹನಗಳ ಮಾಲೀಕರಿಂದ ₹14.10 ಲಕ್ಷ ದಂಡ ವಸೂಲಿ ಮಾಡಲಾಗಿತ್ತು.

‘ಶನಿವಾರವೂ 2,024 ವಾಹನಗಳ ಮೇಲೆ 5,287 ಪ್ರಕರಣಗಳು ಇರುವುದು ಪತ್ತೆಯಾಗಿದ್ದು, ಅದರ ದಂಡದ ಮೊತ್ತ ₹ 18.61 ಲಕ್ಷವನ್ನು ಸಂಗ್ರಹಿಸಲಾಗಿದೆ’ ಎಂದು ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್.ರವಿಕಾಂತೇಗೌಡ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು