ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 1,700 ಕೋಟಿ ದಂಡ ಬಾಕಿ: ಆನ್‌ಲೈನ್ ಪಾವತಿಗೆ ಅವಕಾಶ

Published 3 ಮೇ 2024, 20:05 IST
Last Updated 3 ಮೇ 2024, 20:05 IST
ಅಕ್ಷರ ಗಾತ್ರ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ 3.25 ಕೋಟಿ ಪ್ರಕರಣಗಳು ದಾಖಲಾಗಿದ್ದು, ₹ 1,700 ಕೋಟಿ ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ ಮಾಡಲು ಪೊಲೀಸ್ ಇಲಾಖೆ, ನೂತನವಾಗಿ ಆನ್‌ಲೈನ್ ವ್ಯವಸ್ಥೆ ರೂಪಿಸಿದೆ.

‘ಬೆಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿದವರಿಂದ ದಂಡ ವಸೂಲಿ ಮಾಡಲು ಆನ್‌ಲೈನ್ ವ್ಯವಸ್ಥೆ ರೂಪಿಸಲಾಗಿತ್ತು. ಇದೀಗ, ಈ ವ್ಯವಸ್ಥೆಯನ್ನು ರಾಜ್ಯವ್ಯಾಪಿ ವಿಸ್ತರಿಸಲಾಗಿದೆ. ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಯ ಜನರು, ಈ ವ್ಯವಸ್ಥೆ ಬಳಸಿಕೊಂಡು ಬಾಕಿ ದಂಡ ಪಾವತಿಸಬೇಕು’ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್‌ಕುಮಾರ್ ತಿಳಿಸಿದ್ದಾರೆ.

‘https://payfine.mchallan.com:7271/ ಜಾಲತಾಣಕ್ಕೆ ಭೇಟಿ ನೀಡಿ, ವಾಹನ ನೋಂದಣಿ ಸಂಖ್ಯೆ ನಮೂದಿಸಬೇಕು. ನಂತರ, ದಂಡ ವಿವರ ಕಾಣಿಸುತ್ತದೆ. ಅದನ್ನು ಪರಿಶೀಲಿಸಿ, ಆನ್‌ಲೈನ್ ಮೂಲಕವೇ ದಂಡದ ಮೊತ್ತ ಪಾವತಿ ಮಾಡಬಹುದು’ ಎಂದು ಹೇಳಿದ್ದಾರೆ.

‘ಬೆಂಗಳೂರಿನಲ್ಲಿ 2.68 ಕೋಟಿ ಪ್ರಕರಣಗಳು ಹಾಗೂ ₹ 1,425 ದಂಡ ಪಾವತಿ ಬಾಕಿ ಇದೆ. ಉಳಿದಂತೆ, ರಾಜ್ಯದ ಹಲವು ಜಿಲ್ಲೆಗಳಲ್ಲಿಯೂ ಬಾಕಿ ಪ್ರಕರಣಗಳು ಇವೆ’ ಎಂದಿದ್ದಾರೆ.

‘ಕೆಲ ತಿಂಗಳ ಹಿಂದೆಯಷ್ಟೇ, ದಂಡ ಪಾವತಿಯಲ್ಲಿ ಶೇ 50ರಷ್ಟು ರಿಯಾಯಿತಿ ನೀಡಲಾಗಿತ್ತು. ಈ ಸಂದರ್ಭದಲ್ಲಿ ಹಲವರು ದಂಡ ಪಾವತಿ ಮಾಡಿದ್ದಾರೆ. ಅಷ್ಟಾದರೂ ಕೆಲವರು ದಂಡ ಬಾಕಿ ಉಳಿಸಿಕೊಂಡಿದ್ದಾರೆ. ಅಂಥವರನ್ನು ಪತ್ತೆ ಮಾಡಿ ದಂಡ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT