ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್: ಪ್ರಸ್ತಾವ ಸಲ್ಲಿಸಿಲ್ಲವೆಂದ ಜಂಟಿ ಕಮಿಷನರ್

Published 4 ಜುಲೈ 2023, 14:02 IST
Last Updated 4 ಜುಲೈ 2023, 14:02 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಯಾಗುವ ಕುರಿತು ವದಂತಿಗಳು ಹರಡಿದ್ದು, ಈ ಬಗ್ಗೆ ಯಾವುದೇ ಪ್ರಸ್ತಾವವಿಲ್ಲವೆಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಸಂಚಾರ ನಿಯಮ ಉಲ್ಲಂಘಿಸಿ ರಸ್ತೆಯ ಎಲ್ಲೆಂದರಲ್ಲಿ ನಿಲ್ಲಿಸುತ್ತಿದ್ದ ವಾಹನಗಳನ್ನು ಟೋಯಿಂಗ್ ಮಾಡಲು ವ್ಯವಸ್ಥೆ ಜಾರಿಗೆ ತರಲಾಗಿತ್ತು. ಟೋಯಿಂಗ್ ದಂಡದ ಮೊತ್ತವೂ ಜನರಿಗೆ ಹೊರೆಯಾಗಿತ್ತು. ಇದರ ನಡುವೆಯೇ, ಅಕ್ರಮ ಹಾಗೂ ನಿಯಮಬಾಹಿರ ಚಟುವಟಿಕೆಯಿಂದಾಗಿ ಟೋಯಿಂಗ್ ರದ್ದುಗೊಳಿಸಲಾಗಿತ್ತು.

ಸದ್ಯ ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ರಾಜಧಾನಿಯಲ್ಲಿ ಪುನಃ ಟೋಯಿಂಗ್ ವ್ಯವಸ್ಥೆ ಜಾರಿಯಾಗುವ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯೂ ಆರಂಭವಾಗಿದೆ. ಪೊಲೀಸ್ ಇಲಾಖೆಯಲ್ಲೂ ಕೆಲವರು, ಟೋಯಿಂಗ್ ಮತ್ತೆ ಬರಬಹುದೆಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಚಾರ ವಿಭಾಗದ ಜಂಟಿ ಕಮಿಷನರ್ ಎಂ.ಎನ್. ಅನುಚೇತ್, ‘ಟೋಯಿಂಗ್ ಜಾರಿ ಎಂಬುದು ವದಂತಿ ಅಷ್ಟೇ. ನಮ್ಮಿಂದ ಇದುವರೆಗೂ ಯಾವುದೇ ಪ್ರಸ್ತಾವ ಸಲ್ಲಿಸಿಲ್ಲ. ಟೋಯಿಂಗ್ ಬಗ್ಗೆ ಚಿಂತನೆಯೂ ನಡೆದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT