ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾದಾವರದ ಬಳಿ ವಾಹನ ದಟ್ಟಣೆ ಸಮಸ್ಯೆ ತೀವ್ರ: ಸಾರ್ವಜನಿಕರು ಹೈರಾಣ

Published 15 ಡಿಸೆಂಬರ್ 2023, 15:37 IST
Last Updated 15 ಡಿಸೆಂಬರ್ 2023, 15:37 IST
ಅಕ್ಷರ ಗಾತ್ರ

ಪೀಣ್ಯ ದಾಸರಹಳ್ಳಿ: ತುಮಕೂರು ರಸ್ತೆಯ ಮಾದಾವರ ಬಳಿಯ ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ‘ಸಿಐಐ ಎಕ್ಸಾನ್’ ಬೃಹತ್ ವಸ್ತುಪ್ರದರ್ಶನ ನಡೆಯುತ್ತಿದ್ದು, ಈ ಭಾಗದಲ್ಲಿ ವಾಹನ ದಟ್ಟಣೆ ತೀವ್ರವಾಗಿದೆ. ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಮೇಳಕ್ಕೆ ಪ್ರತಿನಿತ್ಯ ಸಾವಿರಾರು ವಾಣಿಜ್ಯ ಉದ್ಯಮಿಗಳು, ಕೈಗಾರಿಕೋದ್ಯಮಿಗಳು, ಗ್ರಾಹಕರು ಬರುತ್ತಿರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿ ಸಂಚಾರ ಅಸ್ತವ್ಯಸ್ತವಾಗುತ್ತಿದೆ.

ಪ್ರಯಾಣಿಕರು ಟಿಸಿಐ ಅಂಚೆಪಾಳ್ಯ, ಮಾದಾವರ, ಚಿಕ್ಕಬಿದರಕಲ್ಲು, 8ನೇ ಮೈಲು ಬಳಿ 2 ಕಿ.ಮೀ ದಟ್ಟಣೆ ಆಗುತ್ತಿದೆ. ಜನರು ಪ್ರತಿನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ.

ತುಮಕೂರು ರಸ್ತೆ ಮೇಲ್ಸೇತುವೆ, ಮೆಟ್ರೊ ಬಂದರೂ ಸಹ ಟ್ರಾಫಿಕ್ ಕಿರಿಕಿರಿ ತಪ್ಪಿಲ್ಲ. ಈಗ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಪದೇಪದೇ ವಸ್ತು ಪ್ರದರ್ಶನ ನಡೆಯುತ್ತಿರುವುದರಿಂದ ಯಾವಾಗಲೂ ಟ್ರಾಫಿಕ್ ಸಮಸ್ಯೆ ಉಲ್ಬಣಿಸುತ್ತಿದೆ.

ಗೊರಗುಂಟೆಪಾಳ್ಯದಿಂದ ಪಾರ್ಲೆಜಿ ಟೋಲ್‌ವರೆಗೂ ಮೇಲ್ಸೇತುವೆ ದುರಸ್ತಿ ಕಾರ್ಯ ನಡೆಯುತ್ತಿದೆ. ಇದರಿಂದ ಬೃಹತ್ ವಾಹನಗಳಿಗೆ ಅಲ್ಲಿ ಅವಕಾಶವಿಲ್ಲ. ಸೇವಾ ರಸ್ತೆಯಲ್ಲಿ ಸಂಚರಿಸುವುದರಿಂದ ವಾಹನ ದಟ್ಟಣೆ ಜಾಸ್ತಿಯಾಗಿದೆ.

‘ಮಾದಾವಾರ ಮತ್ತು ಚಿಕ್ಕಬಿದರಕಲ್ಲು ಬಳಿ ಕೆಳಸೇತುವೆ ತಿರುವಿನಲ್ಲಿ ಸಂಚಾರ ಪೊಲೀಸರು, ಸಾರ್ವಜನಿಕರಿಗೆ ವಸ್ತು ಪ್ರದರ್ಶನ ಕೇಂದ್ರದ ಕಡೆಗೆ ಬಿಡುವುದಿಲ್ಲ. ಆಗ ಪೋಲಿಸರಿಗೂ ಮತ್ತು ವಾಹನ ಸವಾರರಿಗೆ ಸಣ್ಣಪುಟ್ಟ ಮಾತಿನ ಚಕಮುಕಿ ನಡೆಯುತ್ತಿದೆ. ಅಲ್ಲಿ ಟ್ರಾಫಿಕ್ ಸಮಸ್ಯೆ ಜಾಸ್ತಿ ಆಗುತ್ತದೆ. ಅವರನ್ನು ಟಿಸಿಐಗೆ ಹೋಗಿ ತಿರುಗಿ ಬರಲು ಹೇಳುತ್ತಾರೆ. ಜಿಂದಾಲ್ ಪಬ್ಲಿಕ್ ಶಾಲೆ ಮತ್ತು ಚಿಕ್ಕ ಬಿದರಕಲ್ಲು ಸರ್ಕಾರಿ ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿದ್ದು ಪೋಷಕರು ಅವರನ್ನು ಕರೆತರಲು ದ್ವಿಚಕ್ರ ವಾಹನಗಳಲ್ಲಿ ತೆರಳುತ್ತಾರೆ. ಇದು ಕೂಡ ಟ್ರಾಫಿಕ್ ಸಮಸ್ಯೆಗೆ ಕಾರಣವಾಗಿದೆ’ ಎಂದು ಚಿಕ್ಕಬಿದರಕಲ್ಲು ನಿವಾಸಿ ಸೋಮಶೇಖರ್ ತಿಳಿಸಿದರು.

ಅಂತರರಾಷ್ಟ್ರೀಯ ವಸ್ತು ಪ್ರದೇಶದ ಕೇಂದ್ರಕ್ಕೆ ಇತ್ತೀಚೆಗೆ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಕೂಡ ಆಗಮಿಸಿದ್ದರು. ಅವರು ಬಂದಾಗಲೂ ಸಹ ಮೂರು ನಾಲ್ಕು ಕಿಲೋಮೀಟರ್ ಟ್ರಾಫಿಕ್ ಸಮಸ್ಯೆ ಆಗಿತ್ತು. ಇದಕ್ಕೆಲ್ಲ ಪರ್ಯಾಯ ಮಾರ್ಗದ ಅವಶ್ಯಕತೆ ಇದೆ ಎಂದು ಸ್ಥಳೀಯರು ಹೇಳುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT