54 ಬಾರಿ ಸಂಚಾರ ನಿಯಮ ಉಲ್ಲಂಘನೆ: ₹ 29,500 ದಂಡ

ಬೆಂಗಳೂರು: 54 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದ ದ್ವಿಚಕ್ರ ವಾಹನ ಸವಾರರೊಬ್ಬರಿಗೆ ₹ 29,500 ದಂಡ ವಿಧಿಸಿರುವ ಪೊಲೀಸರು, ಅವರ ವಾಹನವನ್ನೂ ಜಪ್ತಿ ಮಾಡಿದ್ದಾರೆ.
‘ಕೆಎ 02 ಜೆಕ್ಯೂ 8188 ದ್ವಿಚಕ್ರ ವಾಹನದ ಸವಾರ, ಹಲಸೂರು ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಹೊರಟಿದ್ದರು. ಅವರನ್ನು ತಡೆದಿದ್ದ ಪಿಎಸ್ಐ ಧ್ಯಾಮಪ್ಪ ಹಾಗೂ ಸಿಬ್ಬಂದಿ, ತಪಾಸಣೆ ನಡೆಸಿದ್ದರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
‘ಸಿಗ್ನಲ್ ಜಂಪ್, ಹೆಲ್ಮೆಟ್ ಧರಿಸದೇ ಚಾಲನೆ, ಜಿಬ್ರಾ ಕ್ರಾಸ್ನಲ್ಲಿ ವಾಹನ ನಿಲುಗಡೆ ಸೇರಿದಂತೆ ಹಲವು ನಿಯಮಗಳನ್ನು ಸವಾರ ಉಲ್ಲಂಘಿಸಿದ್ದರು. ಅವರಿಗೆ ದಂಡ ವಿಧಿಸಿ ವಾಹನ ಜಪ್ತಿ ಮಾಡಲಾಗಿದೆ. ಸಂಚಾರ ನಿಯಮಗಳ ಬಗ್ಗೆ ಅವರಿಗೆ ತರಬೇತಿ ನೀಡಲಾಗುವುದು. ತರಬೇತಿ ಬಳಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ವಾಹನ ಬಿಡುಗಡೆ ಮಾಡಲಾಗುವುದು’ ಎಂದೂ ತಿಳಿಸಿದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.