ಭಾನುವಾರ, ನವೆಂಬರ್ 29, 2020
21 °C

ಸಂಚಾರ ನಿಯಮ ಉಲ್ಲಂಘನೆ: ವಾರದಲ್ಲಿ ₹ 4.44 ಕೋಟಿ ದಂಡ ಸಂಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸುವರ ಪತ್ತೆಗೆ ನಗರದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಒಂದೇ ವಾರದಲ್ಲಿ ₹ 4.44 ಕೋಟಿ ದಂಡ ಸಂಗ್ರಹಿಸಿದ್ದಾರೆ.

‘ಅ.11ರಿಂದ ಅ.17ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಸಂಚಾರ ನಿಯಮ ಉಲ್ಲಂಘಿಸಿದಕ್ಕಾಗಿ 1.06 ಲಕ್ಷ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಜಂಟಿ ಕಮಿಷನರ್ (ಸಂಚಾರ) ಬಿ.ಆರ್. ರವಿಕಾಂತೇಗೌಡ ತಿಳಿಸಿದರು.

‘ಪ್ರತಿಯೊಬ್ಬರೂ ಸಂಚಾರ ನಿಯಮ ಪಾಲನೆ ಮಾಡಬೇಕು. ಇತ್ತೀಚೆಗೆ ಉಲ್ಲಂಘನೆ ಪ್ರಕರಣಗಳು ಹೆಚ್ಚಾಗಿದ್ದು, ಅಂಥವರನ್ನು ಪತ್ತೆ ಮಾಡಿ ದಂಡ ವಿಧಿಸಲಾಗುತ್ತಿದೆ’ ಎಂದೂ ಹೇಳಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು