ಎಫ್‌ಐಆರ್ ದಾಖಲು ಜತೆಗೆ ನಿಯಮ ಉಲ್ಲಂಘಿಸಿದವರಿಂದ ₹1.95 ಲಕ್ಷ ದಂಡ ಸಂಗ್ರಹಿಸಲಾಗಿದೆ. ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಹಾಗೂ ಸಂಚಾರ ನಿಯಮಗಳ ಮಹತ್ವದ ಬಗ್ಗೆ ಚಾಲಕರಿಗೆ ಅರಿವು ಮೂಡಿಸಲಾಯಿತು. ಮುಂದಿನ ದಿನಗಳಲ್ಲಿಯೂ ಈ ವಿಶೇಷ ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ಸಂಚಾರ ವಿಭಾಗದ (ಪೂರ್ವ) ಡಿಸಿಪಿ ಕುಲದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ.